ಪರಿವರ್ತನಾ ಯಾತ್ರೆಗೆ ಅಮಿತ್ ಷಾ ಚಾಲನೆ, ಮೊಳಗಿತು ಬಿಜೆಪಿ ಚುನಾವಣೆಗೆ ರಣಕಹಳೆ

Amit-n-01

ಬೆಂಗಳೂರು, ನ.2- ಕರ್ನಾಟಕದಲ್ಲಿ ಸ್ವಂತ ಬಲದೊಂದಿಗೆ ಅಧಿಕಾರ ಹಿಡಿಯುವ ಉದ್ದೇಶದಿಂದ ಬಿಜೆಪಿ ಹಮ್ಮಿಕೊಂಡಿರುವ ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಇಂದು ಚಾಲನೆ ದೊರೆತಿದ್ದು, 2018ರ ವಿಧಾನಸಭೆ ಚುನಾವಣೆಗೆ ಬಿಜೆಪಿ ರಣಕಹಳೆ ಮೊಳಗಿಸಿದೆ. ಬೆಂಗಳೂರು ಹೊರವಲಯದಲ್ಲಿರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನವಕರ್ನಾಟಕ ಪರಿವರ್ತನಾ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಉಸ್ತುವಾರಿ ಮುರಳೀಧರರಾವ್, ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ಸಹ ಉಸ್ತುವಾರಿ ಪಿಯೂಷ್‍ಗೋಯಲ್, ಕೇಂದ್ರ ಸಚಿವರಾದ ಅನಂತ್‍ಕುಮಾರ್, ಸದಾನಂದಗೌಡ, ರಮೇಶ್ ಜಿಗಜಿಣಗಿ, ಅನಂತ್‍ಕುಮಾರ್ ಹೆಗಡೆ, ಮುಖಂಡರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ, ಪ್ರಹ್ಲಾದ್‍ಜೋಷಿ ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರ ಸಮ್ಮುಖದಲ್ಲಿ ರಥ ಯಾತ್ರೆಗೆ ಜಾಲನೆ ದೊರೆಯಿತು.

Parivartana-Rally--01
ಇಂದಿನಿಂದ ಜ.25ರವರೆಗೆ 224 ವಿಧಾನಸಭಾ ಕ್ಷೇತ್ರಗಳಲ್ಲಿ 75 ದಿನ ಸಂಚರಿಸಲಿರುವ ಈ ರಥಯಾತ್ರೆಯು ಸುಮಾರು 7500ಕಿ.ಮೀ. ಪ್ರವಾಸ ನಡೆಸಲಿದ್ದು, ಜ.28ರಂದು ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

Tumakuru 02

ಮಿಷನ್ 150 ಗುರಿಯನ್ನು ತಲುಪಲು ಈ ಯಾತ್ರೆಯನ್ನು ಯಡಿಯೂರಪ್ಪ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಪ್ರತಿ ದಿನ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆ, ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿರುವುದು ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರನಿಗೆ ತಲುಪಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶ.

WhatsApp Image 2017-11-02 at 10.39.38 AM

ವಿಧಾನಸಭೆ ಚುನಾವಣೆಗೆ ರಣಕಹಳೆ:

2018ರ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಮಲ ಪಡೆ ನಾಯಕರು ಇಂದಿನಿಂದಲೇ ಚುನಾವಣೆಗೆ ಅಖಾಡವನ್ನು ಸಜ್ಜುಗೊಳಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ. ಇಂದಿನ ರಥಯಾತ್ರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ 15 ಜಿಲ್ಲೆಗಳ ಪ್ರತಿ ಬೂತ್‍ನಿಂದ ಮೂವರು ಕಾರ್ಯಕರ್ತರನ್ನು ಆಹ್ವಾನಿಸಲಾಗಿದೆ. ಸುಮಾರು ಒಂದು ಲಕ್ಷ ಬೈಕ್ ರ್ಯಾಲಿ ಎಲ್ಲರನ್ನೂ ಆಕರ್ಷಿಸಿತು.

WhatsApp Image 2017-11-02 at 10.39.35 AM

ಬೆಂಗಳೂರಿನಿಂದ ಹೊರಡುವ ರಥಯಾತ್ರೆ ಕುಣಿಗಲ್, ಅರಸೀಕೆರೆ, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ ಸೇರಿದಂತೆ ಮತ್ತಿತರ ಕಡೆ ಸಂಚರಿಸಿ ಡಿ.21ರಂದು ಹುಬ್ಬಳ್ಳಿಯಲ್ಲಿ ಸಮಾವೇಶಗೊಳ್ಳಲಿದೆ. ನಂತರ ಅಲ್ಲಿಂದ ಹೊರಡುವ ರಥಯಾತ್ರೆ ಇತರೆ ಭಾಗಗಳಲ್ಲಿ ಸಂಚರಿಸಿ ಮೈಸೂರು ತಲುಪಲಿದೆ.ಜ.28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಸುವ ಮೂಲಕ ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ತೆರೆಬೀಳಲಿದೆ. ಘಟಾನುಘಟಿ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಥಯಾತ್ರೆ ಸಂದರ್ಭದಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ.

WhatsApp Image 2017-11-02 at 10.01.28 AM

ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜಸ್ಥಾನ ಮುಖ್ಯಮಂತ್ರಿ ವಸುಂದರರಾಜೆ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‍ಸಿಂಗ್ ಚೌವ್ಹಾಣ್, ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ, ಕೇಂದ್ರ ಸಚಿವರಾದ ರಾಜನಾಥ್‍ಸಿಂಗ್, ಅರುಣ್‍ಜೇಟ್ಲಿ, ನಿತಿನ್ ಗಡ್ಕರಿ, ಉಮಾಭಾರತಿ ಸೇರಿದಂತೆ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ.

WhatsApp Image 2017-11-02 at 10.01.28 AM(1)

Tumakuru 05

Sri Raghav

Admin