‘ಪಾಕ್ ಆಕ್ರಮಿತ ಪ್ರದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸುತ್ತೇವೆ’
ಜಮ್ಮು, ಆ.14- ಭಾರತಕ್ಕೆ ಸೇರಿದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಿಸುತ್ತೇವೆ ಎಂದು ಪ್ರಧಾನಮಂತ್ರಿಯವರ ಕಾರ್ಯಾಲಯದ ಸಹಾಯಕ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ತಿರಂಗಂ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಪಾಕಿಸ್ತಾನದ ಅಕ್ರಮ ಅತಿಕ್ರಮಣದಿಂದ ಕಾಶ್ಮೀರವನ್ನು ಮುಕ್ತಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ಪ್ರಧಾನಿ ಮೋದಿ ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ಕತುವಾದ ಗಡಿ ಜಿಲ್ಲೆಯಿಂದ ಆರಂಭವಾಗಿರುವ ತ್ರಿವರ್ಣ ಧ್ವಜ ಯಾತ್ರೆ ಭಾರೀ ಮಹತ್ವ ಪಡೆದುಕೊಂಡಿದೆ ಎಂದರು. ವಿವಾದಿತ ಪ್ರದೇಶವಾದ ಮಜಫರಾಬಾದ್ ಪ್ರಾಂತ್ಯದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸುತ್ತೇವೆ ಎಂದು ಸಿಂಗ್ ತಿಳಿಸಿದ್ದಾರೆ.