ಪಾರ್ವತಮ್ಮ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಸಂತಾಪ
ಬೆಂಗಳೂರು, ಮೇ 31- ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ ಡಾ.ರಾಜ್ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ಕುಮಾರ್ ಅವರ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೂರವಾಣಿ ಮೂಲಕ ರಾಜ್ಕುಮಾರ್ ಅವರ ಪುತ್ರ ಶಿವರಾಜ್ಕುಮಾರ್ ಅವರನ್ನು ಸಂಪರ್ಕಿಸಿದ ರಜನಿಕಾಂತ್, ನನಗೂ ಸಹ ಅಮ್ಮನಂತಿದ್ದ ಪಾರ್ವತಮ್ಮ ಅವರು ಹಲವಾರು ಸಂದರ್ಭಗಳಲ್ಲಿ ಸಲಹೆ, ಸೂಚನೆಗಳನ್ನು ಕೊಟ್ಟಿದ್ದರು. ಅವರ ನಿಧನದಿಂದ ಅತೀವ ದುಃಖವಾಗಿದೆ. ಸಾಧ್ಯವಾದರೆ ನಾನೂ ಸಹ ಅಂತಿಮ ದರ್ಶನದಲ್ಲಿ ಪಾಲ್ಗೊಳ್ಳುತ್ತೇನೆ. ನಿಮ್ಮ ದುಃಖದಲ್ಲಿ ನಾನೂ ಬಾಗಿಯಾಗುತ್ತೇನೆ ಎಂದು ತಿಳಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >