ಪ್ರೇಮಲತಾ ದಂಪತಿ ನಿರಾಳ
ಬೆಂಗಳೂರು,ಫೆ.22- ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ ಶಾಸ್ತ್ರಿ ಅವರು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿಯವರನ್ನು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಿರುವ ಪೊಲೀಸರು ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ. ರಾಘವೇಶ್ವರ ಸ್ವಾಮೀಜಿಯವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು 2014ರಲ್ಲಿ ಚಂದ್ರಶೇಖರ್ ಎಂಬುವವರು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ನ್ಯಾಯಲಯಕ್ಕೆ ಬಿ-ರಿಪೋಟ್ ಸಲ್ಲಿಸಿರುವುದರಿಂದ ದಿವಾಕರ ಶಾಸ್ತ್ರಿ ಹಾಗೂ ಪ್ರೇಮಲತಾ ಅವರು ಸದ್ಯ ನಿರಾಳರಾಗಿದ್ದಾರೆ.
2014, ಆ.26ರಂದು ಪ್ರೇಮಲತಾ ವಿರುದ್ಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಹೊನ್ನಾವರ ನ್ಯಾಯಾಲಯಕ್ಕೆ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿರುವ ಕಾರಣ ಬಿಗ್ ರಿಲೀಫ್ ಸಿಕ್ಕಿದೆ. ಪ್ರೇಮಲತಾ ರಾಮಚಂದ್ರಾಪುರಮಠದಲ್ಲಿ ರಾಮಕಥಾ ಗಾಯಕಿಯಾಗಿದ್ದರು.
< Eesanje News 24/7 ನ್ಯೂಸ್ ಆ್ಯಪ್ >