ಬಜೆಟ್‍ನಲ್ಲಿ ಶಿಕ್ಷಣಕ್ಕಾಗಿ 24 ಸಾವಿರ ಕೋಟಿ ರೂ. ಅನುದಾನ ಮೀಸಲಿಡಿ

Spread the love

Education

ಬೆಂಗಳೂರು, ಮಾ.6- ಶಿಕ್ಷಣಕ್ಕಾಗಿ 24 ಸಾವಿರ ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಮೀಸಲಿಡಬೇಕು ಎಂದು ಸಮಾನ ಶಿಕ್ಷಣಕ್ಕಾಗಿ ಸಮನ್ವಯ ವೇದಿಕೆ ಸಂಚಾಲಕ ಶ್ರೀಪಾದ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‍ಟಿಇ ಅಡಿ ಖಾಸಗಿ ಶಾಲೆಗಳನ್ನು ಘೋಷಿಸಬಾರದು. ಮುಂಬರುವ ಆಯವ್ಯಯದಲ್ಲಿ ಶಿಕ್ಷಣಕ್ಕಾಗಿ ಅನುದಾನ ಹೆಚ್ಚಳ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಬೇಕು. ಮುಂಬರುವ ಬಜೆಟ್‍ನಲ್ಲಿ ಶಿಕ್ಷಣಕ್ಕಾಗಿ 24 ಸಾವಿರ ಕೋಟಿ ರೂ.ಗಳನ್ನು ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿದರು.

ನರ್ಸರಿ ಶಿಕ್ಷಕರಿಗೆ ಮಾಸಿಕ ವೇತನವನ್ನು 6 ಸಾವಿರ ರೂ.ಗೆ ನಿಗದಿಪಡಿಸಬೇಕು. ಕಲಿಕಾ ಬೋಧನಾ ಉಪಕರಣಗಳಿಗೆ ಪ್ರತೀ ಶಾಲೆಗೆ 10 ಸಾವಿರ ರೂ. ಹಣ ನೀಡಬೇಕು. ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಬೇಕು. ಈ ಬಗ್ಗೆ ಆಯವ್ಯಯದಲ್ಲಿ ಅನುದಾನ ಮೀಸಲಿಡಬೇಕು ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಅಯೋಮಯವಾಗಿದ್ದು, ಸರ್ಕಾರಿ ಶಾಲೆಗಳನ್ನು ಉಳಿಸಲು ಸರ್ಕಾರ ಮುಂದಾಗಬೇಕು. ಶಿಕ್ಷಕರಿಗೆ ಅಗತ್ಯ ಸೌಲಭ್ಯ ನೀಡಬೇಕು ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin