ಬಡಜನರಿಗೆ ಮನೆ ಕಟ್ಟಿಕೊಳ್ಳಲು 3 ಲಕ್ಷ ಅನುದಾನ ಉಚಿತ

6

ಮುಂಡಗೋಡ,ಫೆ.5- ಗುಡಿಸಲು ಮುಕ್ತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರತಿಯೊಬ್ಬರಿಗೂ ಸೂರು ಕಲ್ಪಿಸಿಕೊಡುವ ನಿಟ್ಟಿನಲ್ಲಿ ವಿವಿಧ ಆಶ್ರಯ ಯೋಜನೆಯಡಿಯಲ್ಲಿ ಬಡಜನರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರ ಸುಮಾರು 3 ಲಕ್ಷದಷ್ಟು ಅನುದಾನವನ್ನು ಯಾವುದೇ ಶರತ್ತಿಲ್ಲದೇ ಉಚಿತವಾಗಿ ನೀಡುತ್ತಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.
ಪಟ್ಟಣದ ವಿವಿಧ ಬಡಾವಣೆಗಳ ರಸ್ತೆ ಕಾಂಕ್ರೀಟಿಕರಣ ಹಾಗೂ ಚರಂಡಿಗಳ ಅಭಿವೃದ್ಧಿಗಾಗಿ ಎಸ್‍ಎಫ್‍ಸಿ ವಿಶೇಷ ಯೋಜನೆಯಡಿಯಲ್ಲಿ ಮಂಜೂರಿಯಾದ ಸುಮಾರು 3 ಕೋಟಿ ರೂ. ಮೊತ್ತದ ಕಾಮಗಾರಿಗಳ ಗುದ್ದಲಿ ಪೂಜೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಜೂರಾದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಕಟ್ಟಡ ಕಾಮಗಾರಿ ಶಿಲಾನ್ಯಾಸ ಹಾಗೂ ಮಲೆನಾಡು ಪ್ರದೇಶಾಭಿವೃದ್ದಿ ಯೋಜನೆಯಡಿ ಮಂಜೂರಾದ ಸಮುದಾಯ ಭವನ ಸೇರಿದಂತೆ ವಿವಿಧ ಕಾಮಗಾರಿಗಳ ಶಿಲಾನ್ಯಾಸ ನೆರವೇರಿಸಿ ಬಳಿಕ ನಗರ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಾಜಪೇಯಿ ಮತ್ತು ಅಂಬೇಡ್ಕರ ವಸತಿ ಯೋಜನೆಯಲ್ಲಿ ಪಟ್ಟಣದ ಬಡಜನರಿಗೆ ಮಂಜೂರಾದ ಮನೆಗಳ ಪಟ್ಟಾ ವಿತರಿಸಿ ಮಾತನಾಡುತ್ತಿದ್ದರು.

ಒಂದೇ ದಿನ ಪಟ್ಟಣದಲ್ಲಿ ಒಟ್ಟಾರೆ 10 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಪಟ್ಟಣದ ಅಭಿವೃದ್ಧಿಗಾಗಿ ಇನ್ನೂ ಹೆಚ್ಚಿನ ಅನುದಾನವನ್ನು ತರುತ್ತೇವೆ. ಜನ ಪ್ರತಿನಿಗಳು ಎಷ್ಟೇ ಅನುದಾನ ತರಬಹುದು ಆದರೆ ಸರ್ಕಾರಿ ಅಕಾರಿಗಳು ಸರಿಯಾಗಿ ಕೆಲಸ ಮಾಡದೆ ಹೋದರೆ ಸಮರ್ಪಕ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಇಲ್ಲಿನ ಅಕಾರಿಗಳು ಒಳ್ಳೆಯ ರೀತಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.ಈ ಸಂಧರ್ಭದಲ್ಲಿ ಪಪಂ ಅಧ್ಯಕ್ಷ ಮಹ್ಮದ ರಫೀಕ ಇನಾಮದಾರ, ಜಿಪಂ ಸದಸ್ಯ ರವಿಗೌಡ ಪಾಟೀಲ್, ಜಯಮ್ಮ ಕೃಷ್ಣ ಹಿರೇಹಳ್ಳಿ, ತಾಪಂ ಅಧ್ಯಕ್ಷೆ ದ್ರಾಕ್ಷಾಯಿಣಿ ಸುರಗಿಮಠ, ಉಪಾಧ್ಯಕ್ಷ ಫಕ್ಕೀರಪ್ಪ ಅಂಟಾಳ, ಮಾಜಿ ಜಿಪಂ ಅಧ್ಯಕ್ಷ ಕೆ.ಆರ್. ಬಾಳೆಕಾಯಿ, ರಾಮಕೃಷ್ಣ ಮೂಲಿಮನಿ, ಪಪಂ ಸದಸ್ಯೆ ರಮಾಬಾಯಿ ಕುದಳೆ ಮುಂತಾದವರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin