ಬಡರೋಗಿಗಳಿಗಾಗಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿ 3 ತಿಂಗಳೊಳಗೆ ಡಯಾಲಿಸಿಸ್ ಕೇಂದ್ರ ಆರಂಭ

Ramesh-Kumar--01

ಬೆಂಗಳೂರು, ಮಾ.27-ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಮುಂದಿನ 3 ತಿಂಗಳೊಳಗಾಗಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸಿ ಬಡರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‍ಕುಮಾರ್ ವಿಧಾನಪರಿಷತ್‍ನಲ್ಲಿ ಹೇಳಿದರು. ಪ್ರಶ್ನೋತ್ತರ ಕಲಾಪದಲ್ಲಿ ಕೆ.ಅಬ್ದುಲ್ ಜಬ್ಬಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯಾವುದೇ ವಂಚನೆ ನಡೆಯಬಾರದೆಂಬ ಹಿನ್ನೆಲೆಯಲ್ಲಿ ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುವುದು ಮತ್ತು ರೋಗಿಗಳಿಗೆ ಅನಿರ್ಬಂಧಿತವಾಗಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಸರಿಯಾದ ಉತ್ತರವನ್ನು ಅಧಿಕಾರಿಗಳು ನೀಡಿಲ್ಲ. ನಾವು ರೋಗಿಗಳಿಗೆ ಯಾವುದೇ ದರವನ್ನು ನಿಗದಿ ಮಾಡಿಲ್ಲ. ಚಿಕಿತ್ಸೆ ಸಂಪೂರ್ಣ ಉಚಿತವಾಗಿರುತ್ತದೆ. ಸಮರ್ಪಕವಾಗಿ ಉತ್ತರ ನೀಡದ ಅಧಿಕಾರಿಗಳ ವಿರುದ್ಧ ನಾನು ಕ್ರಮಕೈಗೊಳ್ಳುತ್ತೇನೆ. ಕ್ರಮಕೈಗೊಳ್ಳದಂತೆ ಯಾರು ಶಿಫಾರಸು ಮಾಡಬಾರದು ಎಂದು ಮನವಿ ಮಾಡಿದರು.  ತಪ್ಪು ಮಾಡುವ ಸರ್ಕಾರಿ ನೌಕರರಿಗೆ ಯಾವ ರಾಜಕಾರಣಿಗಳು ಬೆಂಬಲಕ್ಕೆ ನಿಲ್ಲದಿದ್ದರೆ ಕೆಲಸಗಳು ಸರಿಯಾಗಿ ನಡೆಯುತ್ತವೆ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin