ಬರಗಾಲವನ್ನು ಎದುರಿಸಲು ಸಜ್ಜಾಗಿ : ಅಧಿಕಾರಿಗಳಿಗೆ ಬಿಸಿ ತಾಕೀತು

Spread the love

NANJANAGUDU-2

ನಂಜನಗೂಡು, ಅ.20– ಜಿಲ್ಲೆಯ 7 ತಾಲೂಕುಗಳನ್ನು ಬರಗಾಲವೆಂದು ಸರ್ಕಾರ ಘೋಷಣೆ ಮಾಡಿದ್ದು ಈ ಬರಗಾಲವನ್ನು ಎದುರಿಸಲು ಸಜ್ಜಾಗಿ ಎಂದು ಜಿಲ್ಲಾಧಿಕಾರಿ ರಣದೀಪ್ ತಾಲೂಕು ಮಟ್ಟದ ಅಧಿಕಾರಿಗಳಿಗೆ ತಾಕೀತು ಮಾಡಿದರು.ತಾಪಂ ಸಭಾಂಗಣದಲ್ಲಿ ಕರೆದಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅ.27 ರಂದು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆಯಿರುವುದರಿಂದ ತಾಲೂಕಿನಲ್ಲಿ ಎಲ್ಲೆಲ್ಲಿ ಕುಡಿಯುವ ನೀರಿನ ಕೊರತೆಯಿದೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಿದೆ, ಮಳೆ, ಬೆಳೆಯ ಕೊರತೆಯಿದೆ ಎಂಬುದನ್ನು ನೀವೇ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಮಾಹಿತಿಯನ್ನು ನೀಡಿ ಎಂದರು.

ಮುಂದಿನ ನಾಲ್ಕು ದಿನಗಳ ಒಳಗೆ ಮೂಲಭೂತ ಸೌಕರ್ಯ ಕಲ್ಪಿಸಲು ಎಷ್ಟು ವೆಚ್ಚಬೇಕು ಎಂಬುದನ್ನು ಯೋಜನೆ ಸಿದ್ದಪಡಿಸಿ ನನಗೆ ವರಿದಿ ನೀಡಬೇಕು ಹಾಗೂ ಕುಡಿಯುವ ನೀರು, ಮೇವಿನ ಕೊರತೆಯು ಬಾರದ ರೀತಿಯಲ್ಲಿ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.ಎಲ್ಲೆಲ್ಲಿ ಶಾಲೆ, ಆಸ್ಪತ್ರೆ, ಸರ್ಕಾರಿ ಕಟ್ಟಡಗಳನ್ನು ನಿರ್ಮಿಸಲು ಸ್ಥಳಾವಕಾಶದ ಕೊರತೆಯಿದ್ದಲ್ಲಿ, ಹಾಗೂ ಅನುದಾನದ ಕೊರತೆಯಿದ್ದಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಿ ನನ್ನ ಅಧಿಕಾರದ ವ್ಯಾಪ್ತಿಯಲ್ಲಿ 10 ಎಕರೆ ಒಳಗೆ ಜಮೀನು ಮಂಜೂರು ಅಧಿಕಾರವಿದ್ದು ಅದಕ್ಕಿಂತಲೂ ಹೆಚ್ಚಾಗಿ ಅವಶ್ಯಕತೆಯಿದ್ದಲ್ಲಿ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಮಸ್ಯೆಗಳನ್ನು ನಿವಾರಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ, ಭೂ ಸೇನಾ ನಿಗಮ, ನಿರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸರ್ಕಾರದ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಮುಕ್ತಾಯವಾಗಬೇಕೆಂದು ಅಧಿಕಾರಿಗಳಿಗೆ ಗಡುವು ನೀಡಿದರು.ಜಿ.ಪಂ. ಸಿ.ಇ.ಓ ಶಿವಶಂಕರ್, ತಾಪಂ ಕಾರ್ಯನಿರ್ವಾಹಕಾಧಿಕಾರಿ ಡಾ.ಕೃಷ್ಣಂರಾಜು, ತಹಸೀಲ್ದಾರ್ ದಯಾನಂದ್, ನಗರಸಭಾ ಆಯುಕ್ತ ವಿಜಯ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತ್, ಸಿಡಿಪಿಒ ಗೀತಾಲಕ್ಷ್ಮಿ, ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ್, ಆರೋಗ್ಯಾಧಿಕಾರಿ ಡಾ.ಕಲಾವತಿ, ಪಶುಇಲಾಖಾಧಿಕಾರಿ ಮಂಜುನಾಥ್, ಎಇಇ ರಮೇಶ್, ಶಿವಮಲ್ಲಯ್ಯ, ಹಿಂದುಳಿದ ವರ್ಗದ ಇಲಾಖಾಧಿಕಾರಿ ಚೆನ್ನರುದ್ರಯ್ಯ, ವೃತ್ತ ನಿರೀಕ್ಷಕ ಎಂ.ಸಿ.ರವಿಕುಮಾರ್, ಪಿಎಸೈ ಚೇತನ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಇದ್ದರು.

► Follow us on –  Facebook / Twitter  / Google+

Facebook Comments

Sri Raghav

Admin