ಬಾರಾಮುಲ್ಲಾದಲ್ಲಿ ಭಾರತೀಯ ಸೇನಾ ಕ್ಯಾಂಪ್ ಮೇಲೆ ಉಗ್ರರ ದಾಳಿ

Army-Camp

ಶ್ರೀನಗರ ಅ.03 : ಸರ್ಜಿಕಲ್ ಸ್ಟ್ರೈಕ್ ಗೆ ಪ್ರತೀಕಾರವಾಗಿ ಭಾರತೀಯ ಸೇನಾ ರೈಫಲ್ಸ್ ಕ್ಯಾಂಪ್ ಮೇಲೆ, ಉಗ್ರರು ದಾಳಿ ನಡೆಸಿದ್ದಾರೆ. ರಾತ್ರಿ ಬಾರಾಮುಲ್ಲಾದ ಸಮೀಪದಲ್ಲಿರುವ ಜಾನ್ ಬಾಜ್ ಬೋರಾದ 46 ನೇ ರಾಷ್ಟ್ರೀಯ ರೈಫಲ್ಸ್ ಕ್ಯಾಂಪ್ ಮೇಲೆ 4-5 ಮಂದಿ ಉಗ್ರರು ದಾಳಿ ಮಾಡಿದ್ದು, ಅವರಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬಿ.ಎಸ್.ಎಫ್. ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಸೇನೆಯ ಮೂವರು, ಬಿ.ಎಸ್.ಎಫ್.ನ ಒಬ್ಬರು ಯೋಧರು ಗಾಯಗೊಂಡಿದ್ದಾರೆ. ಕಳೆದ ರಾತ್ರಿ 10.30ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ 46 ರಾಷ್ಟ್ರೀಯ ರೈಫಲ್ಸ್ ಕ್ಯಾಂಪ್ ನ್ನು ಗುರಿಯಾಗಿರಿಸಿಕೊಂಡು ಉಗ್ರರ ಗುಂಪೊಂದು ದಾಳಿ ನಡೆಸಿದೆ. ಶಿಬಿರದ ಮೇಲೆ ಉಗ್ರರು ಗ್ರೆನೇಡ್ ದಾಳಿಯನ್ನು ನಡೆಸಿದ್ದಾರೆ. ಪರಿಣಾಮ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಯೋಧರಿಗೆ ಗಂಭೀರವಾಗಿ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಉಗ್ರರ ಗುಂಪು ದಾಳಿ ನಡೆಸುತ್ತಿದ್ದಂತೆ ಕೂಡಲೇ ಕಾರ್ಯಾಚರಣೆಗಿಳಿದ ಯೋಧರು, ಉಗ್ರರಿಗೆ ದಿಟ್ಟ ಉತ್ತರ ನೀಡಿದ್ದಾರೆ.

ಜೇಲಂ ನದಿಯ ಮೂಲಕ ಎಂಟ್ರಿ ಕೊಟ್ಟ ಉಗ್ರರು, ಕ್ಯಾಂಪ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ನಂತರ ಕಟ್ಟಡವೊಂದರಲ್ಲಿ ಅವಿತುಕೊಂಡು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಸೇನೆಯಿಂದಲೂ ಫೈರಿಂಗ್ ಮಾಡಲಾಗಿದೆ. ಕಟ್ಟಡದ ಸುತ್ತಲೂ ಇದೀಗ ಭಾರತೀಯ ಸೇನೆ ಸುತ್ತುವರೆದಿದ್ದು, ಕಾರ್ಯಾಚರಣೆಯನ್ನು ಮುಂದುವರೆಸುತ್ತಿದ್ದಾರೆ. ಈಗಲೂ ಸ್ಥಳದಲ್ಲಿ ಗುಂಡಿನ ಚಕಮಕಿಗಳ ಶಬ್ಧ ಕೇಳಿಬರುತ್ತಿರುವುದಾಗಿ ಹೇಳಲಾಗುತ್ತಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿ ಬಳಿಕ ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಉಗ್ರರು ಸತತ ಯತ್ನಗಳನ್ನು ನಡೆಸುತ್ತಿದ್ದಾರೆ.

► Follow us on –  Facebook / Twitter  / Google+

Sri Raghav

Admin