ಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಕಲಬುರಗಿ-ಬೀದರ್ ಜನ
ಕಲಬುರಗಿ, ಏ.16- ರಾಜ್ಯಾದ್ಯಂತ ದಿನೇ ದಿನೇ ತಾಪಮಾನದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಅದರಲ್ಲೂ ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಗರಿಷ್ಠ ಪ್ರಮಾಣದ ತಾಪಮಾನ ದಾಖಲಾಗಿದೆ. ಕಲಬುರಗಿಯಲ್ಲಿ 43.6, ಬೀದರ್ 43.1, ಬಾಗಲಕೋಟೆ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ 42 ರಿಂದ 43 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ. ಸೂರ್ಯನ ಆರ್ಭಟಕ್ಕೆ ಬೀದರ್ ಮತ್ತು ಕಲಬುರಗಿ ಜನರು ತತ್ತರಗೊಂಡಿದ್ದಾರೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ಉರಿ ಬಿಸಿಲು ಜನರನ್ನು ಕಾಡುತ್ತಿದೆ.
< Eesanje News 24/7 ನ್ಯೂಸ್ ಆ್ಯಪ್ >