ಬೀದಿ ಕಾಮಣ್ಣರ ನಿಗ್ರಹಕ್ಕೆ ಯುಪಿಯಲ್ಲಿ ಕಾರ್ಯಾಚರಣೆಗಿಳಿದ ಯೋಗಿ ಆ್ಯಂಟಿ ರೋಮಿಯೋ ಸ್ಕ್ವಾಡ್
ಲಕ್ನೋ, ಮಾ.22– ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶದ ಮೇರೆಗೆ ಬೀದಿ ಕಾಮಣ್ಣರನ್ನು ನಿಗ್ರಹಿಸಲು ಆ್ಯಂಟಿ ರೋಮಿಯೋ ಸ್ಕ್ವಾಡ್ ಉತ್ತರ ಪ್ರದೇಶದಲ್ಲಿ ಕಾರ್ಯಾರಂಭ ಮಾಡಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳ ರಕ್ಷಣೆಗಾಗಿ ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸುವುದಾಗಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭರವಸೆ ನೀಡಿದರು. ಚುನಾವಣಾ ಪ್ರಣಾಳಿಕೆಯಲ್ಲಿಯೂ ಇದನ್ನು ತಿಳಿಸಲಾಗಿತ್ತು. ಉರಿನಾಲಿಗೆಯ ಪ್ರಖರ ಹಿಂದುವಾದಿ ಯೋಗಿ ಮುಖ್ಯಮಂತ್ರಿಯಾಗುತ್ತಿದ್ದಂತೆ ಈ ವಿಶೇಷ ದಳ ರಚನೆಗೆ ಆದೇಶ ನೀಡಿದ್ದಾರೆ. ಅದನ್ನು ಪೊಲೀಸ್ ಇಲಾಖೆ ಹಂತ ಹಂತವಾಗಿ ಅನುಷ್ಠಾನಗೊಳಪಡಿಸುತ್ತಿದೆ. ಮೊದಲ ಹಂತದಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಈ ಸ್ಕ್ವಾಡ್ ರಚನೆಯಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >