ಬೆಂಗಳೂರು ತಲುಪಿದ ಹುತಾತ್ಮ ಸಂದೀಪ್ ಪಾರ್ಥಿವ ಶರೀರ : ನಾಳೆ ಹುಟ್ಟೂರಲ್ಲಿ ಅಂತ್ಯಕ್ರೀಯೆ

Sandeep-Shetty

ಬೆಂಗಳೂರು. ಜ.31 : ಜಮ್ಮು ಮತ್ತು ಕಾಶ್ಮೀರದ ಗುರೇಜ್ ನಲ್ಲಿ ಸಂಭವಿಸಿದ ಹಿಮಪಾತದಲ್ಲಿ ಹುತಾತ್ಮನಾದ ಹಾಸನ ಮೂಲದ ಯೋಧ ಸಂದೀಪ್ ಶೆಟ್ಟಿ ಅವರ ಪಾರ್ಥಿವ ಶರೀರ ಇಂದು ಸಂಜೆ ಬೆಂಗಳೂರು ತಲುಪಿದೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರವನ್ನು ತ ತರಲಾಗಿದ್ದ, ಇಲ್ಲಿಂದ ಹಾಸನಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ. ನಾಳೆ ಹುಟ್ಟೂರು ದೇವಿಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.  ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಹುತಾತ್ಮ ಯೋಧ ಸಂದೀಪ್ ಗೆ ಗೌರವ ಸಲ್ಲಿಸಿದ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಸಂದೀಪ್ ಕುಟುಂಬಕ್ಕೆ ರಾಜ್ಯ ಸಕಾಱರದಿಂ 25 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ಹಾಗೂ ಹಾಸನದಲ್ಲಿ 1 ಸೈಟ್ ನೀಡಲಾಗುವುದು ಎಂದು ತಿಳಿಸಿದರು.

ಯೋಧ ಸಂದೀಪ್ ಶೆಟ್ಟಿ ಕುಟುಂಬಕ್ಕೆ ರಾಜ್ಯ ಸರ್ಕಾರದ ಪರವಾಗಿ ಗೌರವ ಸಲ್ಲಿಸಿದ ಪಶುಸಂಗೋಪನೆ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಸರ್ಕಾರದ ವತಿಯಿಂದ ಘೋಷಿಸಲಾಗಿದ್ದ 25 ಲಕ್ಷ ರೂ. ಪರಿಹಾರ ಮೊತ್ತವನ್ನು ಎ.ಮಂಜು ಅವರು ಹಸ್ತಾಂತರಿಸಿದರು. ನಾಳೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ

ಸಂದೀಪ್ ಶೆಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವರು ಪರಿಹಾರ ಧನದ ಚೆಕ್ ವಿತರಿಸಿ, ನಾಳೆ ಯೋಧರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಸ್ವಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಹೇಳಿದರು. ಹುತಾತ್ಮ ಯೋಧನ ಕುಟುಂಬ ವರ್ಗ ಹಾಗೂ ಗ್ರಾಮಸ್ಥರ ಆಶಯದಂತೆ ಡೈರಿ ವೃತ್ತಕ್ಕೆ ಸಂದೀಪ್ ಶೆಟ್ಟಿ ಹೆಸರಿಡಲು ಅಗತ್ಯ ಕ್ರಮವಹಿಸಲಾಗುವುದು. ಕೃಷ್ಣಾ ನಗರ ಬಡಾವಣೆಯಲ್ಲಿ ನಿವೇಶನ ಕೂಡ ದೊರಕಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು .

ಇಂದು ಬೆಳಿಗ್ಗೆ ಶ್ರೀನಗರದಿಂದ ದೆಹಲಿಗೆ ವಿಮಾನದ ಮೂಲಕ ಸಂದೀಪ್ ಪಾರ್ಥಿವ ಶರೀರವನ್ನು ತರಲಾಗಿತ್ತು. ಮಧ್ಯಾಹ್ನ ಸುಮಾರು 12.30ಕ್ಕೆ ದೆಹಲಿಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Sri Raghav

Admin