ಬೆಂಗಳೂರು ವಿಭಜನೆಗೆ ಕೆಂಪೇಗೌಡ ಕೇಂದ್ರ ಸಮಿತಿ ತೀವ್ರ ವಿರೋಧ

Bengaluru

ಬೆಂಗಳೂರು, ಅ.25- ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು ಎಂದು ಬೆಂಗಳೂರು ನಿರ್ಮಾಪಕ ಕೆಂಪೇಗೌಡ ಕೇಂದ್ರ ಸಮಿತಿಯು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ನಾಲ್ಕು ಭಾಗವನ್ನಾಗಿ ವಿಂಗಡನೆ ಮಾಡಲು ಹೊರಟಿರುವುದು ದೃರದೃಷ್ಟಕರ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಮರಿಮಲ್ಲಯ್ಯ ಆಗ್ರಹಿಸಿದ್ದಾರೆ.ಕೆಂಪೇಗೌಡರಿಂದ ನಿರ್ಮಾಣಗೊಂಡ ಬೆಂಗಳೂರು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಆಧುನಿಕ ತಂತ್ರಜ್ಞಾನ , ವೈಜ್ಞಾನಿಕ  ಸೇರಿ ದಂತೆ ವಿವಿಧ ಕ್ಷೇತ್ರಗಳಲ್ಲಿ ದಾಪುಗಾಲಿಟ್ಟಿರುವುದಕ್ಕೆ ಒಂದೇ ಆಡಳಿತ ಇರುವುದರಿಂದ ಬೆಂಗಳೂರು ವಿಶ್ವದಲ್ಲೇ ಐತಿಹಾಸಿಕ ಸಾಧನೆ ಮೆರೆದಿದೆ ಎಂದರು.

ಇಂತಹ ಬೆಂಗಳೂರು ನಗರ ವನ್ನು ನಾಲ್ಕು ಭಾಗಗಳನ್ನಾಗಿ ಮಾಡಲು ನಗರ ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ರಾಜ್ಯ ಸರ್ಕಾರಕ್ಕೆ ಪತ್ರಬರೆದ ಬೆನ್ನಲ್ಲೇ ರಾಜ್ಯ ಸರ್ಕಾರವು ಕೂಡ ಬಿಬಿಎಂಪಿಗೆ ವಿಭಜನೆಗೆ ಮುಂದಾಗಿದೆ. ಆದರೆ, ಬಿಬಿಎಂಪಿಯು ಒಮ್ಮತದ ನಿರ್ಣಯ ಕೈಗೊಂಡು ಬೆಂಗಳೂರು ವಿಭಜನೆಯ ವಿಚಾರ ಕೈಬಿಡುವಂತೆ ನಿರ್ಧರಿಸಿದೆ ಎಂದು ಅವರು ಹೇಳಿದರು. ಈಗಾಗಲೇ ರಾಜ್ಯ ಸರ್ಕಾರವು ನಗರದ ಆಡಳಿತ ವ್ಯವಸ್ಥೆಯನ್ನು ಹಲವು ಭಾಗಗಳನ್ನಾಗಿ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದ್ದು, ಇನ್ನೂ ಬೆಂಗಳೂರನ್ನು ನಾಲ್ಕು ಭಾಗಗಳನ್ನು ಮಾಡಿ ಮತ್ತಷ್ಟು ಸಮಸ್ಯೆಯನ್ನು ಸೃಷ್ಟಿಸಿ ಸಿಲಿಕಾಟನ್ ಸಿಟಿ ಬ್ರ್ಯಾಂಡ್‍ನ್ನು ಕೆಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಬಗ್ಗೆ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ ಎಂದು ಅವರು ತಿಳಿಸಿದರು. ಈಗಾಗಲೇ ಬಿಬಿಎಂಪಿ ವಿಭಜನೆ ವಿರುದ್ಧ ನಮ್ಮ ಸಮಿತಿಯು ರಾಜ್ಯ ಸರ್ಕಾರ ವಿರುದ್ಧ ರಾಜಧಾನಿಯಲ್ಲಿ ಹಲವು ಬಾರಿ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ಮಾಡ ಬಾರದು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡ ಲಾಗಿದೆ ಎಂದು ತಿಳಿಸಿದರು.

► Follow us on –  Facebook / Twitter  / Google+

Sri Raghav

Admin