ಬೆಂಗಳೂರು, ಮಾ.19- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಿದೇಶಿ ಮಹಿಳೆಯನ್ನು ಬಂಧಿಸಿ 38.4 ಕೋಟಿ ರೂ. ಮೌಲ್ಯದ 3 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗೆ ಚಿನ್ನ ಕಳ್ಳ ಸಾಗಾಣೆ ಪ್ರಕರಣವನ್ನು ಪತ್ತೆಹಚ್ಚಿ ನಟಿಯನ್ನು ಬಂಧಿಸಿ 14 ಕೆಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದ ಡಿಆರ್‌ಐ ಅಧಿಕಾರಿಗಳು ಇದೀಗ ಇದೇ ವಿಮಾನ ನಿಲ್ದಾಣಕ್ಕೆ ಕತಾರ್‌ನ ದೋಹಾದಿಂದ ಬಂದ ಘಾನ ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ.
ಈ ಮಹಿಳೆಯನ್ನು ತಪಾಸಣೆಗೊಳಪಡಿಸಿದಾಗ 3.2 ಕೆಜಿ ಕೊಕೇನ್ ಕಂಡು ಬಂದಿದ್ದು, ಇದರ ಮೌಲ್ಯ 38 ಕೋಟಿ ರೂ. ಎಂದು ಅಂದಾಜಿಸಲಾಗಿದೆ.ಈ ಮಹಿಳೆಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿರುವ ಡಿಆರ್‌ಐ ಅಧಿಕಾರಿಗಳು, ಈ ಮಾದಕ ವಸ್ತುವನ್ನು ಎಲ್ಲಿಂದ ತರಲಾಯಿತು.
ಇದರ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ. ಈ ಮಾದಕ ವಸ್ತುವನ್ನು ನಗರಕ್ಕೆ ತಂದು ಯಾವ ಸ್ಥಳಕ್ಕೆ ಸಾಗಿಸುತ್ತಿದ್ದರು ಎಂಬಿತ್ಯಾದಿ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.