ಬೆಳಗಾವಿ ಪಾಲಿಕೆಯ ಮೇಯರ್ ಕಚೇರಿ ಹಾಗೂ ನಾಮಫಲಕಗಳಿಗೆ ಮಸಿ ಬಳಿದು ಕರವೇ ಪ್ರತಿಭಟನೆ

Spread the love

2

ಬೆಳಗಾವಿ, ನ.5- ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಮಾಡಿದ ಎಂಇಎಸ್ ಧೋರಣೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಹಾಗೂ ನಾಮಫಲಕಗಳಿಗೆ ಮಸಿ ಬಳಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಮೇಯರ್ ಮತ್ತು ಉಪ ಮೇಯರ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು, ಮಹಾನಗರ ಪಾಲಿಕೆಯನ್ನು ಸೂಪರ್‍ಸೀಡ್ ಮಾಡಬೇಕೆಂದು ಕರವೇ ಕಾರ್ಯಕರ್ತರು ಆಗ್ರಹಿಸಿದರು.ಎಂಇಎಸ್ ಶಾಸಕ ಸಾಂಬಾಜಿ ಪಾಟೀಲ್ ಮತ್ತು ಬಿಜೆಪಿ ಶಾಸಕ ಸಂಜಯ್‍ಪಾಟೀಲ್ ನಾಮಫಲಕಕ್ಕೂ ಕರವೇ ಕಾರ್ಯಕರ್ತರು ಮಸಿ ಬಳಿದು ಪಾಲಿಕೆ ಕಚೇರಿ ಮುಂದೆ ಕುರಿತು ಪ್ರತಿಭಟನೆ ಮಾಡಲು ಮುಂದಾದಾಗ ಹಲವು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಇರ್ಫಾನ್ ಅತ್ತಾರ್, ಫರೀದಾ ದೇವಲಾಪುರ, ಬಸವರಾಜ ಅವರೋಳ್ಳಿ, ಪ್ರಕಾಶ್ ರಾಥೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆ ಮಾಡಿದವರನ್ನು ಗಡಿಪಾರು ಮಾಡಬೇಕೆಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಆಗ್ರಹಿಸಿದರು.ಪ್ರತೀ ಬಾರಿ ಬೆಳಗಾವಿಯಲ್ಲಿ ಇಂತಹದ್ದೇ ಘಟನೆಗಳು ನಡೆಯುತ್ತಲೇ ಬರುತ್ತಿದೆ. ಎಂಇಎಸ್‍ನವರು ರಾಜ್ಯದಲ್ಲಿ ಇಂತಹ ಕಿಡಿಗೇಡಿ ಕೃತ್ಯಗಳನ್ನು ಮಾಡುತ್ತಲೇ ಇರುತ್ತಾರೆ. ಸರ್ಕಾರ ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸಬೇಕು. ಇತಂಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

 

► Follow us on –  Facebook / Twitter  / Google+

Sri Raghav

Admin