ಬೈಕಿಗೆ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರ ದುರ್ಮರಣ
ಸೂಲಿಬೆಲೆ, ಮೇ 8- ಚಲಿಸುತ್ತಿದ್ದ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಖಾಸಗಿ ಬಸ್ ಕೆಳೆಗೆ ಬಿದ್ದು ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಟೋಲ್ ಗೇಟ್ ಬಳಿ ನಡೆದಿದೆ. ಹೊಸಕೋಟೆ ತಾಲ್ಲೂಕಿನ ಕಟ್ಟಿಗೇನಹಳ್ಳಿಯ ಒಂದೇ ಕುಟುಂಬದ ಮುಬೀನಾ ತಾಜ್ (45),ತಬ್ರೇಜ್(23) ಹಾಗೂ ನಸೀಬಾ(21) ಮೃತ ದುರ್ದೈವಿಗಳು. ಕಟ್ಟಿಗೇನಹಳ್ಳಿ ನಿವಾಸಿಗಳಾದ ಈ ಮೂವರು ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿ ವಾಪಸ್ ಸ್ವಗ್ರಾಮಕ್ಕೆ ಒಂದೇ ಬೈಕಿನಲ್ಲಿ ಬರುತ್ತಿದ್ದರು.
ಹೊಸಕೋಟೆ ಟೋಲ್ ಗೇಟಿ ಸಮೀಪದ ಪೆಟ್ರೋಲ್ ಬಂಕ್ ಹತ್ತಿರ ಈ ಮೂವರಿದ್ದ ಬೈಕಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ನಿಯಂತ್ರಣ ಕಳೆದುಕೊಂಡ ಬೈಕು ಮುಂದೆ ಪ್ರಯಾಣಿಕರನ್ನು ಇಳಿಸುತ್ತಾ ನಿಂತಿದ್ದ ಖಾಸಾಗಿ ಬಸ್ಗೆ ಡಿಕ್ಕಿ ಹೊಡೆದು ಕೆಳೆಗೆ ತೂರಿದೆ. ಡಿಕ್ಕಿ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಇವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
< Eesanje News 24/7 ನ್ಯೂಸ್ ಆ್ಯಪ್ >