ಬೈಕ್ ಡಿಕ್ಕಿ : ಗಾಯಗೊಂಡಿದ್ದ ಸವಾರ ಸಾವು

Spread the love

accident--bike

ಮಳವಳ್ಳಿ, ನ.26- ಬೈಕ್‍ಗೆ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಸೋಮನಹಳ್ಳಿ ಗ್ರಾಮದ ವಾಸಿ ಶಿವಣ್ಣ (43) ಮೃತಪಟ್ಟ ದುರ್ದೈವಿ. ನಿನ್ನೆ ಬೆಳಗ್ಗೆ 11.30ರ ಸಮಯದಲ್ಲಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಇದೇ ಗ್ರಾಮದ ಶಿವಮಲ್ಲು ಎಂಬುವರು ತಮ್ಮ ಹೀರೋ ಹೊಂಡಾ ಬೈಕ್‍ನಲ್ಲಿ ಹೋಗುತ್ತಿದ್ದು, ಹಿಂಭಾಗದಲ್ಲಿ ಶಿವಣ್ಣ ಕುಳಿತಿದ್ದರು. ಪೂರಿಗಾಲಿ ಕಡೆಯಿಂದ ಬರುತ್ತಿದ್ದ ಪಲ್ಸರ್ ಬೈಕ್ ವೇಗವಾಗಿ ಬಂದು ಹಿಂದಿನಿಂದ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ತಲೆಗೆ ತೀವ್ರಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಿವಣ್ಣ ಅವರನ್ನು ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಶಿವಮಲ್ಲು ಅವರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣನಾದ ಪಲ್ಸರ್ ಬೈಕ್‍ನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin