ಬ್ರಹ್ಮೋಸ್ ಸೂಪರ್ಸಾನಿಕ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ
ಬಾಲಸೂರ್(ಒಡಿಶಾ), ಮಾ.11– ಭಾರತವು ಇಂದು ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿ ಉಡಾವಣೆಯ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದೆ. ಇಲ್ಲಿನ ಚಾಂಢೀಪುರ್ನ ಸಮಗ್ರ ಪರೀಕ್ಷಾ ವಲಯ (ಐಟಿಆರ್)ದಲ್ಲಿ ಇಂದು ಬೆಳಗ್ಗೆ 11.33ರಲ್ಲಿ ಸಂಚಾರಿ ಉಡಾವಣಾ ವಾಹಕದ ಮೂಲಕ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾಯಿಸಲಾಯಿತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಅಧಿಕಾರಿಗಳು ತಿಳಿಸಿದ್ದಾರೆ. ೩೦೦ಕೆಜಿ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಈ ಕ್ಷಿಪಣಿ ವೈರಿ ಪಡೆಯ ನಿಖರ ಗುರಿಯನ್ನು ಧ್ವಂಸ ಮಾಡಬಲ್ಲದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >