ಬ್ರೇಕಿಂಗ್ : ನಾಳೆ ಪಿಯುಸಿ ರಿಸಲ್ಟ್ , ಮೇ 12ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ
ಬೆಂಗಳೂರು, ಮೇ 9-ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಇದಕ್ಕಾಗಿ ಪಿಯು ಮಂಡಳಿ ಅಧಿಕಾರಿಗಳು ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಗರ ಪ್ರದೇಶ 823 ಹಾಗೂ ಗ್ರಾಮೀಣ ಪ್ರದೇಶದ 175ಸೇರಿದಂತೆ ಒಟ್ಟು 998 ಕೇಂದ್ರಗಳಲ್ಲಿ ಪಿಯು ಪರೀಕ್ಷೆ ನಡೆದಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ. ಸರ್ಕಾರದ ಅಧಿಕೃತ ವೆಬ್ಸೈಟ್ www.pue.kar.nic.in ನಲ್ಲಿ ನಾಳೆ ಮಧ್ಯಾಹ್ನ 3 ಗಂಟೆಯಿಂದ ಫಲಿತಾಂಶ ಲಭ್ಯವಾಗಲಿದೆ. ಮೇ 12 ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶವೂ ಕೂಡ ಹೊರಬೀಳಲಿದೆ.
ಮೇ 12ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ :
ಬೆಂಗಳೂರು, ಮೇ 9- ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಮೇ 12 ರಂದು ಪ್ರಕಟವಾಗಲಿದೆ. ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ಸೈಟ್ನಲ್ಲಿ ಮೇ 12ರಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಮರುದಿನ ಬೆಳಗ್ಗೆ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಕಾರಿ ವೆಬ್ಸೈಟ್ನಲ್ಲಿ ಮಾತ್ರ ಫಲಿತಾಂಶ ಲಭ್ಯವಾಗಲಿದೆ. ಯಾವುದೇ ಖಾಸಗಿ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟಕ್ಕೆ ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿಲ್ಲ.
< Eesanje News 24/7 ನ್ಯೂಸ್ ಆ್ಯಪ್ >