ಭಯೋತ್ಪಾದನೆ ನಿಗ್ರಹಕ್ಕೆ ನಾಯಕತ್ವ ಪ್ರದರ್ಶಿಸುವಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ದೋವಲ್ ಕರೆ

Dhoval--01

ಬೀಜಿಂಗ್, ಜು.28-ಭಯೋತ್ಪಾದನೆ ನಿಗ್ರಹ ಸೇರಿದಂತೆ ಪ್ರಾದೇಶಿಕ ಮತ್ತು ಜಾಗತಿಕ ಮಹತ್ವದ ವಿಷಯಗಳ ಕುರಿತು ನಾಯಕತ್ವ ಪ್ರದರ್ಶಿಸುವಂತೆ ಬಿಕ್ಸ್ ದೇಶಗಳಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‍ಎಸ್‍ಎ) ಅಜಿತ್ ದೋವಲ್ ಕರೆ ನೀಡಿದ್ದಾರೆ.  ಭಾರತ ಮತ್ತು ಚೀನಾ ನಡುವೆ ಸೇನಾ ಸಂಘರ್ಷ ಉಲ್ಬಣಗೊಳ್ಳಲು ಕಾರಣವಾಗಿರುವ ಸಿಕ್ಕಿಂ ಬಿಕ್ಕಟ್ಟು ನಿವಾರಣೆಯಲ್ಲಿ ಭಾರತದ ಜೇಮ್ಸ್‍ಬಾಂಡ್ ಎಂದೇ ಖ್ಯಾತರಾಗಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಚೀನಾದಲ್ಲಿ ನಡೆದ ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಇಂಡಿಯಾ, ಚೀನಾ, ಸೌತ್ ಆಫ್ರಿಕಾ) ಎನ್‍ಎಸ್‍ಎಗಳ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಮಾತನಾಡಿದ ದೋವಲ್, ಜಾಗತಿಕ ಶಾಂತಿ ಮತ್ತು ಸ್ಥಿರತೆ ಮೇಲೆ ದುಷ್ಪರಿಣಾಮ ಬೀರಿರುವ ಭದ್ರತಾ ವಿಷಯಗಳ ಕುರಿತು ಚರ್ಚಿಸಲು ಬ್ರಿಕ್ಸ್ ವೇದಿಕೆಯನ್ನು ನಾವು ಸಮರ್ಥವಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದರು.  ಎಲ್ಲ ಕ್ಷೇತ್ರಗಳಲ್ಲೂ ಹೊರಹೊಮ್ಮುತ್ತಿರುವ ಐದು ಸದಸ್ಯ ರಾಷ್ಟ್ರಗಳ ಬ್ರಿಕ್ಸ್ ಭಯೋತ್ಪಾದನೆ ನಿಗ್ರಹದಲ್ಲಿ ನಾಯಕತ್ವ ವಹಿಸುವ ಅಗತ್ಯವಿದೆ ಎಂದು ದೋವಲ್ ಹೇಳಿದರು.

ಚೀನಾದ ತಮ್ಮ ಸಹವರ್ತಿ ಯಾಂಗ್ ಜೀಚಿ ಆಯೋಜಿಸಿದ್ದ ಈ ಸಭೆಯಲ್ಲಿ, ಈಶಾನ್ಯ ರಾಜ್ಯದ ಡೋಕ್ಲಾ ಬಿಕ್ಕಟ್ಟಿನ ಬಗ್ಗೆ ದೋವಲ್ ಯಾವುದೇ ವಿಷಯ ಪ್ರಸ್ತಾಪಿಸಲಿಲ್ಲ.  ಭಾರತ-ಚೀನಾ ಗಡಿ ಬಿಕ್ಕಟ್ಟು ಮಾತುಕತೆಗಾಗಿ ವಿಶೇಷ ಪ್ರತಿನಿಧಿಗಳಾಗಿರುವ ದೋವಲ್ ಮತ್ತು ಯಾಂಗ್ ನಿನ್ನೆ ದ್ವಿಪಕ್ಷೀಯ ಮಾತುಕತೆ ಕುರಿತು ಸಮಾಲೋಚನೆ ನಡೆಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Sri Raghav

Admin