ಭಾರತ-ಪಾಕ್ ಗಡಿಯಲ್ಲಿ ಪ್ರಕ್ಷುಬ್ಧ ಸ್ಥಿತಿ : ವಿಶ್ವಸಂಸ್ಥೆ ಕಳವಳ

Spread the love

Baan-Ki-Moon

ವಿಶ್ವಸಂಸ್ಥೆ, ನ.25-ಕಾಶ್ಮೀರ ಕಣಿವೆಯ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ತಲೆದೋರಿರುವ ಪ್ರಕ್ಷುಬ್ಧ ಸ್ಥಿತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಬಾನ್ ಕೀ ಮೂನ್, ಈ ಪ್ರಾಂತ್ಯದಲ್ಲಿ ಶಾಂತಿ ನೆಲೆಸಬೇಕೆಂದು ಸಲಹೆ ಮಾಡಿದ್ದಾರೆ.  ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಗಡಿ ಹತೋಟಿ ರೇಖೆಯುದ್ದಕ್ಕೂ ಪರಿಸ್ಥಿತಿ ಹದಗೆಡುತ್ತಿರುವ ಬಗ್ಗೆ ಮಹಾ ಪ್ರಧಾನ ಕಾರ್ಯದರ್ಶಿಯವರು ತೀವ್ರ ಆತಂಕ ವ್ಯಕ್ತಪಡಿಸಿದ್ಧಾರೆ. ಈ ಪ್ರದೇಶದಲ್ಲಿ ಶಾಂತಿ ಮತ್ತು ಸುರಕ್ಷತೆ ನೆಲೆಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಬಾನ್-ಕೀ ಮೂನ್ ಅವರ ವಕ್ತಾರು ಹೇಳಿಕೆಯೊಂದರಲ್ಲಿ ಹೇಳಿದ್ದಾರೆ.  ಗಡಿ ಭಾಗದ ಜನರ ಜೀವ ಹಾಗೂ ಆಸ್ತಿ-ಪಾಸ್ತಿ ನಷ್ಟ ರಕ್ಷಿಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin