ಮಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಭಾಗಶ: ಕೊಳೆತ 2 ಶವಗಳು ಪತ್ತೆ

Spread the love

Dead-Bodies

ಮಂಗಳೂರು, ಫೆ.15 : ಕರಾವಳಿ ನಗರಿ ಮಂಗಳೂರಿನ ಪಂಪ್ ವೆಲ್ ಬಳಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಇಬ್ಬರು ಅಪರಿಚಿತ ಮೃತ ದೇಹಗಳು ಬುಧವಾರ ಸಂಜೆ ಪತ್ತೆಯಾಗಿದೆ. ಎರಡೂ ಶವಗಳು ಭಾಗಶ: ಕೊಳೆತಿದ್ದು, ಮೂರು ದಿನಗಳ ಹಿಂದೆ ಸಾವಿಗೀಡಾಗಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಕಟ್ಟಡದ 6ನೇ ಮಹಡಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಎರಡೂ ಮೃತದೇಹ ಅಂಗಾತ ಮಲಗಿದ ಸ್ಥಿತಿಯಲ್ಲಿದ್ದು ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಐದಾರು ವರ್ಷಗಳಿಂದ ಪ್ರಾರಂಭಗೊಂಡಿದ್ದ ಈ ಕಟ್ಟಡದ ಕಾಮಗಾರಿ ಕೆಲ ತಿಂಗಳುಗಳಿಂದ ಸ್ಥಗಿತಗೊಂಡಿತ್ತು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೋ, ಅಥವಾ ಬೇರೆ ಯಾರೋ ಹತ್ಯೆ ಮಾಡಿದ್ದಾರೋ ಎಂಬ ಸ್ಪಷ್ಟ ಮಾಹಿತಿ ದೊರಕಿಲ್ಲ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

ಮೃತ ಯುವಕರು ಸುಮಾರು 30 ರಿಂದ 35 ವರ್ಷದೊಳಗಿನವರಾಗಿದ್ದು ಇವರ ಗುರುತು ಇನ್ನೂ ಪತ್ತೆಯಾಗಿಲ್ಲ. ಇವರನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸರ ತನಿಖೆಯ ನಂತರವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಳಬೇಕಿದೆ.

Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin