ಮಂಗಳೂರು : ಸಿಡಿಲು ಬಡಿದು ಮಗು ಸೇರಿ ಮೂವರು ಸ್ಥಳದಲ್ಲೇ ಸಾವು
ಮಂಗಳೂರು, ಏ.12 : ಸಿಡಿಲು ಬಡಿದು ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮದ ಜಕ್ರಿಬೆಟ್ಟು ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಡ್ಯಾಗೇರ ಹಳ್ಳಿ, ಶಿರಾ ತಾಲ್ಲೂಕಿನ ಜಯ್ಯಮ್ಮ (28), ಕಣಕಮ್ಮ (29), ಶಶಿಕಲಾ (7) ಮೃತ ದುರ್ದೈವಿಗಳು ಘಟನೆಯಲ್ಲಿ ಎರಡು ವರ್ಷದ ಲಿಖಿತ ಎಂಬ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನದಿಯೊಂದರ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಸಿಡಿಲು ಬಡಿದು ಈ ದುರ್ಘಟನೆ ಸಂಭವಿಸಿದೆ. ಮೃತರು ತುಮಕೂರು ಜಿಲ್ಲೆ ಶಿರಾ ತಾಲೂಕಿನ ಡ್ಯಾಗೇರ ಹಳ್ಳಿ ನಿವಾಸಿಗಳಾಗಿದ್ದು, ಬಂಟ್ವಾಳದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments