ಮಂಜೇಗೌಡರ ರಾಜೀನಾಮೆ ಅಂಗೀಕಾರ

Manjegowda--01

ಬೆಂಗಳೂರು,ಏ.10-ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಸಾರಿಗೆ ಇಲಾಖೆ ಹಿರಿಯ ಮೋಟಾರು ವಾಹನ ನಿರೀಕ್ಷಕ ಬಿ.ಪಿ.ಮಂಜೇಗೌಡ ಅವರ ರಾಜೀನಾಮೆ ಅಂಗೀಕಾರವಾಗಿದೆ.   ವಾಹನ ನಿರೀಕ್ಷಕ ಹುದ್ದೆಗೆ ಮಂಜೇಗೌಡ ನೀಡಿದ್ದ ರಾಜೀನಾಮೆ ಬಗ್ಗೆ ರಾಜ್ಯ ಅಡ್ವೋಕೇಟ್ ಜನರಲ್ ಅಭಿಪ್ರಾಯದಂತೆ ಸಾರಿಗೆ ಇಲಾಖೆಯು ಮಂಜೇಗೌಡರು ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದೆ. ರಾಜೀನಾಮೆಯನ್ನು ಸರ್ಕಾರ ಅಂಗೀಕರಿಸಿರುವುದನ್ನು ಮಂಜೇಗೌಡ ಅವರು ದೃಢಪಡಿಸಿದ್ದಾರೆ.ಇದಕ್ಕೂ ಮೊದಲು ರಾಜೀನಾಮೆ ಅಂಗೀಕರಿಸುವುದು ಸಮಂಜಸವಲ್ಲ ಎಂದು ಕಾನೂನು ಇಲಾಖೆ ಅಭಿಪ್ರಾಯಪಟ್ಟಿತ್ತು.

Manjegowda--01

ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿದ ಹಾಗೂ ಬಳ್ಳಾರಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಮಂಜೇಗೌಡರ ಮೇಲಿತ್ತು. ಅವರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ನೀಡುವ ಸಾಧ್ಯತೆಗಳಿವೆ. ಹಾಸನದ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ದತೆ ನಡೆಸಿದ್ದರು. ಹೊಳೆನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಾಗಿವೆ.

Sri Raghav

Admin