ಮಂಡ್ಯದಲ್ಲಿ 250 ಪ್ರತಿಭಟನಾಕಾರರ ವಿರುದ್ಧ ಎಫ್ಐಆರ್ ದಾಖಲು

Y-Manday

ಮಂಡ್ಯ ಸೆ.08 : ತಮಿಳುನಾಡಿಗೆ ನೀರು ಹರಿಸಿದ್ದನ್ನು ವಿರೋಧಿಸಿ ಮಂಡ್ಯದಲ್ಲಿ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಯಲ್ಲಿ ಅಪಾರ ಪ್ರಮಾಣದ ಸರ್ಕಾರಿ ಆಸ್ತಿಪಾಸ್ತಿಗೆ ನಷ್ಟವಾಗಿದ್ದು, ಇದೇ ಆರೋಪದಡಿ ಸುಮಾರು 250ಕ್ಕೂ ಹೆಚ್ಚು ಪ್ರತಿಭಟನಾಕಾರರ ವಿರುದ್ಧ ದೂರು ದಾಖಲಿಸಲಾಗಿದೆ.  ಪ್ರತಿಭಟನೆಯಿಂದ ಸರ್ಕಾರಿ ಆಸ್ತಿ-ಪಾಸ್ತಿಗೆ ಭಾರಿ ನಷ್ಟವಾಗಿದೆ ಎಂದು ಆರೋಪಿಸಿ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದು, ಸುಮಾರು 250 ಮಂದಿ ಅನಾಮಿಕ ಪ್ರತಿಭಟನಾಕಾರರು ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅತ್ತ ಮಂಡ್ಯದಲ್ಲಿ ರೈತರ ಆಕ್ರೋಶ ಭುಗಿಲು ಮುಟ್ಟಿರುವಂತೆಯೇ ಇತ್ತ ಕಬಿನಿ ಜಲಾಶಯಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಕೂಡ ನಡೆದಿದೆ. ಆದರೆ ಜಲಾಶಯಕ್ಕೆ ವ್ಯಾಪಕ ಭದ್ರತೆ ಒದಗಿಸಿದ್ದರಿಂದ ಪೊಲೀಲಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಕಬಿನಿ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರೈತರು ಹಾಗೂ ಕನ್ನಡಪರ ಸ0ಘಟನೆಗಳ ನೂರಾರು ಕಾಯ9ಕತ9ರನ್ನು ಪೊಲೀಸರು ಬ0ಧಿಸಿ ಬಿಡುಗಡೆಗೊಳಿಸಿದರು. ಮುತ್ತಿಗೆ ಹಾಕಲು ತೆರಳಿದ ರೈತರನ್ನು ಬ0ಧಿಸಲು ಪೊಲೀಸರು ಮು0ದಾಗುತ್ತಿದ0ತೆ ರೈತ ಮುಖ0ಡರಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು.

► Follow us on –  Facebook / Twitter  / Google+

Sri Raghav

Admin