ಮಕ್ಕಳಾಗದಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ

ದಾವಣಗೆರೆ,ಏ.26-ಮಕ್ಕಳಾಗಲಿಲ್ಲ ಎಂದು ಜಿಗುಪ್ಸೆಗೊಂಡಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಗಳೂರು ತಾಲ್ಲೂಕಿನ ತಮಲೇಹಳ್ಳಿ ಗ್ರಾಮದ ನಿವಾಸಿ ಗಂಗತಿಮ್ಮಯ್ಯ(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಳೆದ 15 ವರ್ಷಗಳ ಹಿಂದೆಯೇ ಮದುವೆಯಾಗಿದ್ದು , ಇನ್ನು ಮಕ್ಕಳಾಗಲಿಲ್ಲ ಎಂದು ಜಿಗುಪ್ಸೆಗೊಂಡಿದ್ದನ್ನು. ಇದರಿಂದ ಮದ್ಯವ್ಯಸನಿ ಕೂಡ ಆಗಿದ್ದನು. ಭಾನುವಾರ ತಮ್ಮ ಮನೆಯ ಅಂಗಳದಲ್ಲಿ ಮದ್ಯಪಾನದ ಜೊತೆ ಕ್ರಿಮಿನಾಶಕ ಸೇವಿಸಿದ್ದಾನೆ. ಕೂಡಲೇ ಮನೆಯವರು ಸ್ಥಳೀಯರ ಸಹಾಯದಿಂದ ಜಿಲ್ಲಾಸ್ಪತ್ರೆಗೆ ಆತನನ್ನು ದಾಖಲು ಮಾಡಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin