ಮಕ್ಕಳ ಪ್ರತಿಭೆ ಗುರುತಿಸಿ ವೇದಿಕೆ ಕಲ್ಪಿಸಲು ಶಿಕ್ಷಕರ ಪಾತ್ರ ಮುಖ್ಯ

kr--pete

ಕೆ.ಆರ್.ಪೇಟೆ, ಆ.19- ಮಕ್ಕಳಲ್ಲಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯ ಎಂದು ಜಿಪಂ ಸದಸ್ಯ ಹೆಚ್.ಟಿ.ಮಂಜು ಹೇಳಿದರು.ತಾಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಹರಿರಾಯನಹಳ್ಳಿ ಸಿ.ಆರ್.ಸಿ. ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಕ್ಕಳಲ್ಲಿ ಕ್ರೀಡೆ, ಸಾಂಸ್ಕೃತಿಕ , ಪ್ರತಿಭಾ ಕಾರಂಜಿ ಕಾರ್ಯಕ್ರಮಗಳಲ್ಲಿ ಹೆಚ್ಚು ಆಸಕ್ತಿ ಇರುತ್ತದೆ. ಇಂತಹ ಪ್ರತಿಭೆಯನ್ನು ಶಿಕ್ಷಕರು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸಬೇಕೆಂದು ಸಲಹೆ ನೀಡಿದರು.

 

 

ಪೋಷಕರೂ ಸಹ ಮಕ್ಕಳನ್ನು ಕೇವಲ ಪಠ್ಯ ಪುಸ್ತಕಕ್ಕೆ ಮಾತ್ರ ಸೀಮಿತಗೊಳಿಸದೇ ಅವರು ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಲು ಅವಕಾಶ ಒದಗಿಸಿಕೊಡಬೇಕು ಎಂದು ಮಂಜು ಸಲಹೆ ನೀಡಿದರು. ತಾಪಂ ಸದಸ್ಯೆ ದೀಪಶ್ರೀಮಂಜೇಗೌಡ, ಗ್ರಾಪಂ ಅಧ್ಯಕ್ಷ ರಮೇಶ್‍ಗೌಡ, ಮುಖ್ಯ ಶಿಕ್ಷಕ ಎಚ್.ಎಸ್.ಮಹಾದೇವೇಗೌಡ, ಗ್ರಾಪಂಉಪಾಧ್ಯಕ್ಷ ಮಂಜಮ್ಮಮಂಜೇಗೌಡ, ಸದಸ್ಯರಾದ ಎ.ಪಿ.ಶ್ರೀಧರ್, ಎ.ಸಿ.ಮುರುಳಿ, ಲೀಲಾವತಿಪ್ರಕಾಶ್, ಎಸ್.ಡಿ.ಎಂ.ಸಿ.ಅಧ್ಯಕ್ಷ ಈಶ್ವರ್, ಕರವೇ ಗ್ರಾಮ ಘಟಕದ ಅಧ್ಯಕ್ಷರಾದ ಎ.ಎಸ್.ಶ್ರೀನಿವಾಸ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Sri Raghav

Admin