ಮಣಿಪುರರಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಎನ್.ಬೀರೇನ್ ಸಿಂಗ್ ಅಧಿಕಾರ ಸ್ವೀಕಾರ

Biren-Singh

ಇಂಪಾಲ್,ಮಾ.15-ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದ ಮಣಿಪುರದಲ್ಲಿ ಬಿಜೆಪಿ ಇಂದು ಅಧಿಕಾರಕ್ಕೆ ಬರುವುದರೊಂದಿಗೆ ಈಶಾನ್ಯ ರಾಜ್ಯದಲ್ಲೂ ಕಮಲದ ಪರ್ವ ಆರಂಭವಾಗಿದೆ. ರಾಜಧಾನಿ ಇಂಪಾಲದಲ್ಲಿ ರಾಜ್ಯಪಾಲರ ಭವನದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಬಿಜೆಪಿಯ ಎನ್.ಬೀರೇನ್ ಸಿಂಗ್ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.   ರಾಜ್ಯಪಾಲ ನಜ್ಮ ಹೆಫ್ತುಲಾ ಅವರು ನೂತನ ಮುಖ್ಯಮಂತ್ರಿಗೆ ಅಧಿಕಾರ ಗೌಪ್ಯತೆ ಬೋಧಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಮಾಧವ್, ಉಸ್ತುವಾರಿ ಪಿಯೂಷ್ ಚಾವಲ್ ಸೇರಿದಂತೆ ಹಲವು ಗಣ್ಯರು ಈ ಅಪರೂಪದ ಸಮಾರಂಭಕ್ಕೆ ಸಾಕ್ಷಿಯಾದರು.

ಇದೇ ವೇಳೆ ಬಿರೇನ್ ಸಿಂಗ್ ಸಂಪುಟಕ್ಕೆ ಎನ್‍ಪಿಎಫ್, ಎಲ್‍ಜೆಪಿ ಹಾಗೂ ಪಕ್ಷೇತರರು ಸೇರ್ಪಡೆಯಾದರು.  ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 60 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 28, ಬಿಜೆಪಿ 21, ಎನ್‍ಪಿಎಫ್‍ನ 4, ಎನ್‍ಪಿಪಿ 4, ಎಲ್‍ಜೆಪಿ 1 ವಿಜೇತರಾಗಿದ್ದರು.   ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಪರಿಸ್ಥಿತಿಯ ಲಾಭ ಪಡೆದ ಬಿಜೆಪಿ ಎನ್‍ಪಿಪಿ, ಎನ್‍ಪಿಎಫ್ ಹಾಗೂ ಎಲ್‍ಜೆಪಿ ಮತ್ತು ಪಕ್ಷೇತರ ಶಾಸಕರ ಬೆಂಬಲ ಪಡೆದು ಸರ್ಕಾರ ರಚನೆಗೆ ಹಕ್ಕು ಮಂಡಿಸಿತ್ತು.

ನಿನ್ನೆ ರಾಜ್ಯಪಾಲರಾದ ನಜ್ಮಾ ಹೆಫ್ತುಲಾ ಸರ್ಕಾರ ರಚನೆ ಮಾಡುವಂತೆ ಬಿರೇನ್ ಸಿಂಗ್ ಅವರಿಗೆ ಆಹ್ವಾನ ನೀಡಿದ್ದರು. ಶನಿವಾರ ಪ್ರಕಟಗೊಂಡ ವಿಧಾನಸಭೆ ಚುನಾವಣೆ ಫಲಿತಾಂಶ ಉತ್ತರ ಪ್ರದೇಶ, ಉತ್ತರಖಂಡ್‍ನಲ್ಲಿ ಬಿಜೆಪಿ ಪ್ರಚಂಡ ಬಹುಮತ ಪಡೆದಿದ್ದರೆ ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಗದ್ದುಗೆ ಹಿಡಿದಿತ್ತು.
ಮಣಿಪುರ ಹಾಗೂ ಗೋವಾ ರಾಜ್ಯಗಳಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.  ನಿನ್ನೆಯಷ್ಟೇ ಪುಟ್ಟ ರಾಜ್ಯ ಗೋವಾದಲ್ಲಿ ಬಿಜೆಪಿ ಅಧಿಕಾರ ಹಿಡಿದಿತ್ತು. ಕೇಂದ್ರ ರಕ್ಷಣಾ ಸಚಿವರ ವಿರುದ್ದ ಮನೋಹರ್ ಪರಿಕ್ಕರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin