ಮತದಾನ ಅಪವಿತ್ರಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ: ಯಡಿಯೂರಪ್ಪ ಗಂಭೀರ ಆರೋಪ
ನಂಜನಗೂಡು, ಏ.18- ಮುಖ್ಯಮಂತ್ರಿಗಳು ಮತದಾನವನ್ನು ಅಪವಿತ್ರಗೊಳಿಸಿದ್ದಾರೆ. ನನ್ನ 50 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ವಾಮಮಾರ್ಗ ಚುನಾವಣೆ ಕಂಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು. ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ದಲಿತ ನಾಯಕ ಶ್ರೀನಿವಾಸ ಪ್ರಸಾದ್ ಅವರನ್ನು ಸೋಲಿಸಲು ಜೆಡಿಎಸ್ನೊಂದಿಗೆ ಕೈ ಜೋಡಿಸಿ ಷಡ್ಯಂತ್ರ ಮಾಡಿ ತಾತ್ಕಾಲಿಕವಾಗಿ ಯಶಸ್ವಿಯಾಗಿದ್ದಾರೆ ಎಂದು ಹರಿಹಾಯ್ದರು. ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಮಾತನಾಡಿ, ಉಪ ಚುನಾವಣೆಯನ್ನು ಯಾವ ರೀತಿ ಎದುರಿಸಿದ್ದೇವೆಂದು ಮುಖ್ಯಮಂತ್ರಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಜಿಪಂ, ತಾಪಂ ನಮ್ಮ ಕೈಯಲ್ಲಿದ್ದರೂ ಸೋತಿದ್ದೇವೆ. ಮುಖ್ಯಮಂತ್ರಿಗಳು ಹಣದ ಹೊಳೆಯನ್ನೇ ಹರಿಸಿದ್ದರಿಂದ ಸೋಲನುಭವಿಸಬೇಕಾಯಿತು ಎಂದು ಹೇಳಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿಶಟ್ಟಿ, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಕೋಟೆ ಎಂ ಶಿವಣ್ಣ, ಗ್ರಾಮಾಂತರ ಉಪಾಧ್ಯಕ್ಷ ಎಸ್.ಮಹದೇವಯ್ಯ, ಮಾಜಿ ಶಾಸಕರಾದ ನಂಜುಂಡಸ್ವಾಮಿ, ಸಿ.ರಮೇಶ್, ಕೋಟೆ ಚಿಕ್ಕಣ್ಣ, ಎ.ಆರ್.ಕೃಷ್ಣಮೂರ್ತಿ , ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ತೇಜಸ್ವಿನಿ ರಮೇಶ್, ಜಿಪಂ ಉಪಾಧ್ಯಕ್ಷ ನಟರಾಜ್, ಗುಂಡ್ಲುಪೇಟೆ ನಿರಂಜನ್ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
< Eesanje News 24/7 ನ್ಯೂಸ್ ಆ್ಯಪ್ >