ಮತ್ತೆ 3 ದಿನ ಮಳೆ ಸಾಧ್ಯತೆ

Spread the love

Accuvwe

ಬೆಂಗಳೂರು, ಏ.21-ರಾಜ್ಯದಲ್ಲಿ ಚದುರಿದಂತೆ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಇನ್ನೂ ಎರಡು-ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಸ್ಥಳೀಯವಾಗಿ ವಾತಾವರಣ ದಲ್ಲಿ ಉಂಟಾಗುವ ಬದಲಾ ವಣೆ, ಬಿಸಿಲಿನ ತಾಪಮಾನ ಹೆಚ್ಚಳ ಮೊದಲಾದ ಕಾರಣಗಳಿಂದಾಗಿ ಗುಡುಗು- ಮಿಂಚು ಸಹಿತ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

ನಿನ್ನೆ ಸಂಜೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗಿದೆ. ಇಂದು ಸಂಜೆ ಹಾಗೂ ರಾತ್ರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಅವರು ತಿಳಿಸಿದರು.

Facebook Comments

Sri Raghav

Admin