ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

Spread the love

arrest

ಬೆಳಗಾವಿ,ಸೆ.16- ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಚಿಕ್ಕೋಡಿ ಪಟ್ಟಣದಲ್ಲಿ ಬಂಧಿಸಲಾಗಿದೆ. ಸ್ವತಃ ಚಿಕ್ಕೋಡಿ ತಹಸೀಲ್ದಾರ್ ಚಿದಂಬರ ಕುಲಕರ್ಣಿ, ಅಬಕಾರಿ ಸಿಪಿಐ ಬಸವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಹಲವು ದಿನಗಳಿಂದ ಇಲ್ಲಿ ಅಕ್ರಮವಾಗಿ ಮದ್ಯ ಮಾರಾಟಲಾಗುತ್ತಿತ್ತು. ದೂರ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಯರಾಂ ಅವರು ಬಾರ್ ಮುಚ್ಚುವಂತೆ ಆದೇಶಿಸಿದ್ದರು. ಆದರೂ ಇದನ್ನು ಉಲ್ಲಂಘಿಸಿ ದಂಧೆ ನಡೆಸುತ್ತಿದ್ದ ಹುಲಿಗಮ್ಮಾ ಬಾರ್ ನ ಮಾಲೀಕ ಯರ್ರಿಸ್ವಾಮಿ ಎಂಬುವರನ್ನು ವಶಕ್ಕೆ ಪಡೆಯಲಾಗಿತ್ತಾದರೂ ಆತ ತಪ್ಪಿಸಿಕೊಂಡಿದ್ದಾರೆ. ಬಾರ್‍ನಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ ಅಂಗಡಿಗೆ ಬೀಗಮುದ್ರೆ ಹಾಕಿದ್ದಾರೆ. ಸುಮಾರು 6 ಲಕ್ಷಕ್ಕೂ ಹೆಚ್ಚು ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin