ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಬೆಂಗಳೂರು, ಜ.16- ಸೆಕ್ಯೂರಿಟಿ ಗಾರ್ಡ್ ಆಗಿದ್ದ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ನ್ಯೂಟೌನ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಟ್ಟುರು ಲೇಔಟ್ನ ಅಂಬಾ ಭವಾನಿ ದೇಗುಲ ಸಮೀಪದ ನಿವಾಸಿ ಸಂಗೀತಾ (28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೂಲತಃ ಅಸ್ಸೋಂನವರಾದ ಈಕೆ ಕಾರ್ಪೆಂಟರ್ ಸಂತೋಷ್ ಎಂಬುವರನ್ನು ಮದುವೆಯಾಗಿದ್ದಾರೆ. ಅಟ್ಟೂರಿನಲ್ಲಿ ವಾಸವಿದ್ದು, ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ದಂಪತಿಯಿಬ್ಬರಿಗೂ ಕುಡಿತದ ಚಟವಿದ್ದು, ರಾತ್ರಿ ವೇಳೆ ಕುಡಿದು ಇಬ್ಬರೂ ಜಗಳವಾಡುತ್ತಿದ್ದರು ಎನ್ನಲಾಗಿದೆ. ರಾತ್ರಿ 11 ಗಂಟೆ ಸುಮಾರಿನಲ್ಲಿ ರೂಂಗೆ ಹೋದ ಸಂಗೀತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಮೃತ ಪತಿ ಪೊಲೀಸರಿಗೆ ದೂರು ನೀಡಿದ್ದು, ಯಲಹಂಕ ನ್ಯೂ ಟೌನ್ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.