ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

ದೊಡ್ಡಬಳ್ಳಾಪುರ, ಫೆ.25- ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಸಂಜಯ್‍ನಗರದ ನಿವಾಸಿ ವನಜಾ(32) ಮೃತಪಟ್ಟ ಮಹಿಳೆ.ಎರಡು ದಿನಗಳ ಹಿಂದೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ವನಜಾ ಗಂಭೀರ ಗಾಯಗೊಂಡಿದ್ದರು. ತಕ್ಷಣ ಇವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇವರು ಸಾವನ್ನಪ್ಪಿದ್ದಾರೆ.

ಸಂಬಂಧಿಕರ ಆಕ್ರೋಶ:

ವನಜಾ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರು ಅಂತ್ಯಸಂಸ್ಕಾರಕ್ಕಾಗಿ ಸ್ಮಶಾನದ ಮುಂದೆ ಕಾದು ಕುಳಿತರೂ ವಿಕ್ಟೋರಿಯಾ ಆಸ್ಪತ್ರೆಯಿಂದ ನಗರಕ್ಕೆ ಶವ ತರಲು ತಡವಾದ್ದರಿಂದ ಸಂಜೆ ಅಂತ್ಯ ಸಂಸ್ಕಾರ ಮಾಡಲು ಮುಕ್ತಿಧಾಮದ ಸಿಬ್ಬಂದಿ ಅವಕಾಶ ನೀಡದ ಕಾರಣ ಆಕ್ರೋಶ ವ್ಯಕ್ತಪಡಿಸಿದ ಸಂಬಂಧಿಕರು ರಾತ್ರಿಯಿಡೀ ಸ್ಮಶಾನದ ಮುಂದೆಯೇ ಕಾದು ಕುಳಿತಿದ್ದರು. ನಂತರ ಹಿರಿಯರ ಮಧ್ಯಪ್ರವೇಶದಿಂದ ವನಜಾರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin