ಮನೆ ಬೀಗ ಒಡೆದು ನಗ-ನಾಣ್ಯ ಲೂಟಿ

robbery

ಕೋಲಾರ,ಆ.17- ಮನೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 25 ಸಾವಿರ ನಗದು ದೋಚಿರುವ ಘಟನೆ ಇಂದು ಬೆಳಗ್ಗೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಾಂತಿನಗರ ನಿವಾಸಿ ನಾರಾಯಣಸ್ವಾಮಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿರುವ ನಾರಾಯಣಸ್ವಾಮಿ ಅವರ ಗೋಕುಲಂ ಕಾಲೇಜು ಸಮೀಪದಲ್ಲಿ ವಾಸವಿದ್ದರು. ನಿನ್ನೆ ರಾತ್ರಿ ನೆಂಟರ ಮನೆಗೆ ತೆರಳಿದ್ದವರು ಇಂದು ಬೆಳಗ್ಗೆ ಮನೆಗೆ ಹಿಂದಿರುಗಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ನಗರ ಪೊಲೀಸರಿಗೆ ದೂರು ನೀಡಿದ್ದು , ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Sri Raghav

Admin