ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಐದು ಲಾರಿಗಳ ವಶ

Seized-lorry

ಕೋಲಾರ, ಅ.6- ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಐದು ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾನೆ 4 ಗಂಟೆ ಸಮಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಅವರ ಮನೆ ಸಮೀಪವೇ ಹಾದು ಹೋಗುತ್ತಿದ್ದ ಲಾರಿಗಳನ್ನು ಹಿಂಬಾಲಿಸಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.ಈ ವೇಳೆ ಸಾರ್ವಜನಿಕರು ಕೂಡ ಇದ್ದರೆಂದು ತಿಳಿದುಬಂದಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಅದನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.ಶ್ರೀನಿವಾಸಪುರದಿಂದ ಬೆಂಗಳೂರಿಗೆ ಈ ಲಾರಿಗಳಲ್ಲಿ ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

 

► Follow us on –  Facebook / Twitter  / Google+

 

Sri Raghav

Admin