ಮಲೆಮಹದೇಶ್ವರ ದೇವಸ್ಥಾನದ ಹುಂಡಿ ಕಳ್ಳತನ

MALEMAHADESHWARA
ನಂಜನಗೂಡು, ಏ.20- ಮಲೆಮಹದೇಶ್ವರ ದೇವಸ್ಥಾನದ ಬೀಗ ಮುರಿದು ಹುಂಡಿಯಲ್ಲಿದ್ದ ಹಣವನ್ನು ದೋಚಿರುವ ಘಟನೆ ನಂಜನಗೂಡು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ತಾಲ್ಲೂಕಿನ ಆಲಂಬೂರಿನಲ್ಲಿರುವ ಮಲೆಮಹದೇಶ್ವರ ದೇವಸ್ಥಾನದ ಬೀಗ ಮುರಿದು ಕಳ್ಳರು ಒಳನುಗ್ಗಿ ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿದ್ದಾರೆ.ಇಂದು ಬೆಳಗ್ಗೆ ಅರ್ಚಕರು ದೇವಸ್ಥಾನಕ್ಕೆ ತೆರಳಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin