Thursday, January 16, 2025
Homeರಾಜ್ಯಮಾಜಿ ಸಂಸದ ಎಂ.ಶ್ರೀನಿವಾಸ್ ವಿಧಿವಶ

ಮಾಜಿ ಸಂಸದ ಎಂ.ಶ್ರೀನಿವಾಸ್ ವಿಧಿವಶ

Former MP M. Srinivas passes away

ಬೆಂಗಳೂರು,ಜ.16- ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಸಂಸದ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರು ನಿಧನರಾಗಿದ್ದಾರೆ.

ಮೃತರು ಪತ್ನಿ, ಪುತ್ರ ವೆಂಕಟೇಶ್, ಪುತ್ರಿಯರು, ಸಹೋದರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು, ಹಿತೈಷಿಗಳನ್ನು ಅಗಲಿದ್ದಾರೆ. ಕಳೆದ ಹಲವು ದಿನಗಳಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ. ಆಸ್ಪತ್ರೆಯಿಂದ ಜಯನಗರದ 7ನೇ ಬ್ಲಾಕ್ನಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನದವರೆಗೆ ಅಂತಿಮ ದರ್ಶನಕ್ಕೆ ಇಡಲಾಗಿತ್ತು.

ಮೃತರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ನಾಳೆ ಉತ್ತರಹಳ್ಳಿಯಲ್ಲಿ ನಡೆಯಲಿದೆ.ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಉತ್ತರಹಳ್ಳಿ ಸರ್ಕಲ್ನಲ್ಲಿರುವ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಬಳಿ ಇರುವ ಆರ್ಎಂಎಸ್ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.

ಸಂತಾಪ:
ಮಾಜಿ ಸಂಸದ ಎಂ.ಶ್ರೀನಿವಾಸ್ ಅವರ ನಿಧನಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಎಂ.ಶ್ರೀನಿವಾಸ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾಗಿದ್ದ ಅವರು, ಉತ್ತರಹಳ್ಳಿ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿದ್ದರು. ಕ್ಷೇತ್ರ ಪುನರ್ ವಿಂಗಡನೆ ನಂತರ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಿಂದಲೂ ಬಿಜೆಪಿಯಿಂದ ಸ್ಪರ್ಧಿಸಿ ವಿಜೇತರಾಗಿದ್ದರು. ನಂತರ ನಡೆದ ಚುನಾವಣೆಯಲ್ಲಿ ಪರಾಭವಗೊಂಡ ಬಳಿಕ ಅವರು ಬಹುತೇಕ ರಾಜಕೀಯದಿಂದ ನೇಪಥ್ಯಕ್ಕೆ ಸರಿದಿದ್ದರು.

RELATED ARTICLES

Latest News