Wednesday, April 16, 2025
Homeಇದೀಗ ಬಂದ ಸುದ್ದಿಮುಷ್ಕರ ನಿರತ ಲಾರಿ ಮಾಲೀಕರ ಜೊತೆ ಮುಖ್ಯಮಂತ್ರಿ ಸಂಧಾನ

ಮುಷ್ಕರ ನಿರತ ಲಾರಿ ಮಾಲೀಕರ ಜೊತೆ ಮುಖ್ಯಮಂತ್ರಿ ಸಂಧಾನ

ಬೆಂಗಳೂರು, ಏ.15-ಡಿಸೇಲ್ ದರ ಹೆಚ್ಚಳ ಕೈ ಬಿಡುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಿನ್ನೆ ಮಧ್ಯ ರಾತ್ರಿಯಿಂದ ಮುಷ್ಕರ ಆರಂಭಿಸಿರುವ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿರುವ ಸಂಧಾನ ಸಭೆ ಫಲ ನೀಡಿಲ್ಲ.

ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಸಂಜೆ ಸಭೆ ನಡೆಸಲಾಯಿತು. ಗೃಹ ಸಚಿವ ಜಿ.ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮುಷ್ಕರ ನಿರತರ ಮನವೋಲಿಸಲು ಯತ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿ ಬಜೆಟ್ ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2  ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಇನ್ನೂ ಕಡಿಮೆಯಿದೆ. ರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡಿ ಎಂದು ಮನವಿ ಮಾಡಿದರು.

ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲಿಕರು ಸಹಕರಿಸಬೇಕು. ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ. ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು.  ಈ ಕುರಿತಾಗಿ ಇನ್ನೊಮ್ಮೆ ಲಾರಿ ಮಾಲಿಕರ ಸಂಘದೊಂದಿಗೆ ಸಭೆ ನಡೆಸಲಾಗುವುದು ಎಂದರು.

RELATED ARTICLES

Latest News