ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

IPS-01

ಬೆಂಗಳೂರು, ಮಾ.27- ಮೂವರು ಐಪಿಎಸ್ ಅಧಿಕಾರಿಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಆದೇಶಿಸಿ ಸರ್ಕಾರ ವರ್ಗಾವಣೆ ಮಾಡಿದೆ. ಆಡಳಿತ ವಿಭಾಗದ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಮೃತ್ ಪೌಲ್ ಅವರನ್ನು ಗುಪ್ತದಳಕ್ಕೆ ವರ್ಗಾಯಿಸಲಾಗಿದೆ. ಪೊಲೀಸ್ ಪ್ರಧಾನ ಕಚೇರಿ-1ರ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಉಮೇಶ್ ಕುಮಾರ್ ಅವರನ್ನು ಆಡಳಿತ ವಿಭಾಗಕ್ಕೆ ವರ್ಗಾಯಿಸಲಾಗಿದೆ.  ಗುಪ್ತದಳದ ಡೆಪ್ಯೂಟಿ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಎನ್.ಸತೀಶ್‍ಕುಮಾರ್ ಅವರನ್ನು ಡೆಪ್ಯೂಟಿ ಇನ್ಸ್‍ಪೆಕ್ಟರ್ ಆಫ್ ಪೊಲೀಸ್ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin