ಮೇಟಿ ಈಸ್ ನೀಟ್, ಸಿಐಡಿ ಕ್ಲೀನ್‍ಚಿಟ್

meti9

ಬೆಂಗಳೂರು, ಮೇ 24– ಮಾಜಿ ಸಚಿವ ಎಚ್.ವೈ.ಮೇಟಿ ಅವರ ರಾಸಲೀಲೆ ಪ್ರಕರಣಕ್ಕೆ ಸಿಐಡಿ ಕ್ಲೀನ್‍ಚಿಟ್ ನೀಡಿದೆ.  ಮಹಿಳೆ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ. ವಿಡಿಯೋ ಎಡಿಟಿಂಗ್ ಮಾಡಿ ಪ್ರಸಾರ ಮಾಡಲಾಗಿದೆ. ಮೂಲ ವಿಡಿಯೋ ಇಲ್ಲ. ಹೀಗಾಗಿ ಮೇಟಿ ಅವರ ಮೇಲಿನ ಆರೋಪ ಸಾಬೀತು ಮಾಡಬಹುದಾದ ಯಾವುದೇ ಅಂಶಗಳು ತನಿಖೆಯಲ್ಲಿ ಕಂಡು ಬಂದಿಲ್ಲ ಎಂದು ಸಿಐಡಿ ಗೃಹ ಇಲಾಖೆಗೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ತಿಳಿದು ಬಂದಿದೆ.ಅಬಕಾರಿ ಸಚಿವರಾಗಿದ್ದ ಎಚ್.ವೈ.ಮೇಟಿ ಅವರ ಮೇಲೆ ರಾಸಲೀಲೆ ಆರೋಪ ಕೇಳಿ ಬಂದಿತ್ತು. ಅವರ ಕಚೇರಿಯಲ್ಲಿ ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದ ದೃಶ್ಯಗಳು ಮಾಧ್ಯಮಗಳಲ್ಲಿ ಬಿತ್ತರಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಲ್ಲಿ ನನ್ನದೇನು ತಪ್ಪಿಲ್ಲ. ಆ ವಿಡಿಯೋ ಸೃಷ್ಟಿ ಮಾಡಲಾಗಿದೆ. ನನ್ನನ್ನು ತೇಜೋವಧೆ ಮಾಡುವ ಷಡ್ಯಂತ್ರ ಮಾಡಲಾಗಿದೆ ಎಂದು ಹೇಳಿದ್ದರು. ಈ ಸಂಬಂಧ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ತನಿಖೆ ನಡೆಸಿದ ಸಿಐಡಿ ಮೇಟಿ ಅವರಿಗೆ ಕ್ಲೀನ್‍ಚಿಟ್ ನೀಡಿದ ವರದಿಯನ್ನು ಗೃಹ ಇಲಾಖೆಗೆ ಸಲ್ಲಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin