ಮೇಲ್ಮನೆ ಉಪಚುನಾವಣೆ ಹಿನ್ನೆಲೆಯಲ್ಲಿ ಫೆ.3ರಂದು ಸಾಂದರ್ಭಿಕ ರಜೆ

Spread the love

Eesanje--Eesanjenews

ಬೆಂಗಳೂರು, ಫೆ.1– ರಾಜ್ಯ ವಿಧಾನ ಪರಿಷತ್‍ನ ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಫೆ.3ರಂದು ಮತದಾನ ನಡೆಯಲಿದ್ದು, ಅಂದು ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.  ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾನ ಮಾಡಲು ಶಿಕ್ಷಕರಿಗೆ ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ನಿಗೋಷಿಯೇಬಲ್ ಇನ್ಸ್ಟ್ರುಮೆಂಟ್ ಕಾಯ್ದೆ ಪ್ರಕಾರ ವಿಶೇಷ ಸಾಂದರ್ಭಿಕ ರಜೆಯನ್ನು ಐದು ಜಿಲ್ಲೆಗಳಿಗೆ ಸೀಮಿತವಾಗಿ ನೀಡಲಾಗಿದೆ. ಕೇಂದ್ರ ಬಜೆಟ್ – 2017 (Live Updates) ]

ಉಪಚುನಾವಣೆ ನಡೆಯುವ ಜಿಲ್ಲೆಗಳ ಸರ್ಕಾರಿ, ಖಾಸಗಿ, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin