ಮೇ 10ರಂದು ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಸಿಗಲ್ಲ ..!
ಬೆಂಗಳೂರು,ಮೇ.4-ಕಮೀಷನ್ ದರ ಹೆಚ್ಚಳ, ಅಪೂರ್ವ ಚಂದ್ರ ಸಮಿತಿ ವರದಿ ಅನುಷ್ಠಾನ, ಮೇಲಧಿಕಾರಿಗಳ ಕಿರುಕುಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ಪೆಟ್ರೋಲ್ ಹಾಗೂ ಡೀಸೆಲ್ ವರ್ತಕರ ಒಕ್ಕೂಟ ಮೇ 10ರಂದು ದೇಶಾದ್ಯಂತ ಬಂದ್ಗೆ ಕರೆ ಕೊಟ್ಟಿದೆ. ಮೇ 10ರಿಂದ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸದೆ ಪ್ರತಿಭಟನೆ ನಡೆಸಲಾಗುವುದು ಕೇಂದ್ರ ಸರ್ಕಾರ ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒಕ್ಕೂಟದ ಅಧ್ಯಕ್ಷ ಬಿ.ಆರ್.ರವೀಂದ್ರನಾಥ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ಅಪೂರ್ವ ಚಂದ್ರ ಸಮಿತಿ ಶಿಫಾರಸ್ಸಿನಂತೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟಗಾರರಿಗೆ ಕಮೀಷನ್ ದರ ಹೆಚ್ಚಳ, ಮೇಲಧಿಕಾರಿಗಳಿಂದ ಆಗುತ್ತಿರುವ ಕಿರುಕುಳ ಪ್ರಕರಣ ಸೇರಿದಂತೆ ಮತ್ತಿತರ ಬಗ್ಗೆ ಶಿಫಾರಸ್ಸು ಮಾಡಿತ್ತು. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರದಾನ್ ಅವರು ಈ ಎಲ್ಲ ಬೇಡಿಕೆಗಳನ್ನು ಕಾಲಮಿತಿಯೊಳಗೆ ಈಡೇರಿಸಲು ಭರವಸೆ ಕೊಟ್ಟಿದ್ದರು. ಮುಂಬೈ ಮತ್ತು ದೆಹಲಿಯಲ್ಲಿ ಎರಡು ಬಾರಿ ಸಭೆ ನಡೆಸಲಾಗಿತ್ತು.
ಮೇ 9ರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮೇ 10ರಂದು ದೇಶಾದ್ಯಂತ ಬಂದ್ಗೆ ಕರೆ ನೀಡದ್ದೇವೆ ಎಂದು ತಿಳಿಸಿದರು. ಸರ್ಕಾರ ನಮ್ಮ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡಿದ್ದರಿಂದ 10ರಿಂದ ಪೆಟ್ರೋಲ್, ಡಿಸೇಲ್ ಹಾಗೂ ಸೀಮೆಎಣ್ಣೆ ಖರೀದಿ ಮಾಡದೆ ಪ್ರತಿಭಟನೆ ನಡೆಸಲಾಗುವುದು, ಮೇ 15ರಂದು ಒಂದನೇ ಹಂತದ ಬಂಕ್ಗಳು ಕಾರ್ಯ ನಿರ್ವಹಿಸಲಿವೆ. ಹೀಗಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ಪೆಟ್ರೋಲ್ ಬ್ಯಾಂಕ್ ಮಾಲೀಕರ ಸಭೆ ಕರೆದು ಸಮಸ್ಯೆಯನ್ನು ಬಗೆಹರಿಸಬೇಕು ಎಂದರು. ಒಕ್ಕೂಟದ ಮುಖಂಡರಾದ ವೇಣುಗೋಪಾಲ್, ಆನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
< Eesanje News 24/7 ನ್ಯೂಸ್ ಆ್ಯಪ್ >