ಮೈಸೂರಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ

ACB-Mysuru

ಮೈಸೂರು,ಮಾ.3– ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲಿನ ದಾಳಿ ಮುಂದುವರೆಸಿರುವ ಎಸಿಬಿ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಇಲ್ಲಿನ ಗ್ರಾಮೀಣಾಭಿವೃದ್ದಿ ಇಲಾಖೆಯ ಸೂಪರಿಂಟೆಂಡೆಂಟ್ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಗ್ರಾಮೀಣಾವೃದ್ಧಿ ಇಲಾಖೆಯ ಸೂಪರಿಂಟೆಂಡೆಂಟ್ ಎಸ್.ರಂಗನಾಥ್ ನಾಯ್ಕ್ ಅವರ ಇಲ್ಲಿನ ವಿಜಯನಗರ 1ನೇ ಹಂತದಲ್ಲಿರುವ ನಿವಾಸ, ಕಚೇರಿ, ಚಿಕ್ಕಮಗಳೂರಿನ ಮನೆ ಬೆಂಗಳೂರು ನಾಗರಬಾವಿಯಲ್ಲಿನ ನಿರ್ಮಾಣ ಹಂತದ ಮನೆ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.   ಮೈಸೂರಿನ ನಿವಾಸದಲ್ಲಿ 20 ಕೋಟಿಗೂ ಅಧಿಕ ಮೌಲ್ಯದ ಆಸ್ತಿ, ಚಿನ್ನಾಭರಣಗಳು ಪತ್ತೆಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹಲವು ದಾಖಲೆಗಳನ್ನು ವಶಪಡಿಸಿಕೊಂಡಿರುವ ಎಸಿಬಿ ಅಧಿಕಾರಿಗಳು ಅವುಗಳ ಪರಿಶೀಲನೆ ನಡೆಸುತ್ತಿದ್ದಾರೆ. ರಂಗನಾಥ್ ಅವರ ಮನೆಯಲ್ಲಿದ್ದ ದುಬಾರಿ ಬೆಲೆಯ 3 ಕಾರು, ಕೆಟಿಎಂ ಬೈಕ್‍ನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin