ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ : ವ್ಯಕ್ತಿ ಸಾವು
ಮಂಡ್ಯ, ಮಾ.13-ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ದ್ಯಾಪಸಂದ್ರ ಗ್ರಾಮದಲ್ಲಿ ನಡೆದಿದೆ.ಯೋಗಾನಂದ (35) ಮೃತಪಟ್ಟ ದುರ್ದೈವಿ.ನಿನ್ನೆ ಸಂಜೆ ದ್ಯಾಪಸಂದ್ರ ಗ್ರಾಮದಲ್ಲಿ ಯೋಗಾನಂದ್ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಬೈಕ್ ಸವಾರನ ನಿಯಂತ್ರಣ ತಪ್ಪಿ ಆತನಿಗೆ ಡಿಕ್ಕಿ ಹೊಡೆದಿದೆ.ಇದರಿಂದ ತೀವ್ರಗಾಯಗೊಂಡ ಯೋಗಾನಂದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸವಾರ ಸ್ಥಳದಲ್ಲೇ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >