ರಾಜಕೀಯ ಪಕ್ಷಗಳಿಗೆ ವಿದೇಶಿ ದೇಣಿಗೆ ಕುರಿತು ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತರಾಟೆ

Delhi-High-Court

ನವದೆಹಲಿ, ಜು.21-ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳು ಪಡೆದ ವಿದೇಶಿ ದೇಣಿಗೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ನೀಡಿದ ನಿರ್ದೇಶನದ ಅನ್ವಯ ಇನ್ನೂ ಏಕೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಆರು ವಾರಗಳಲ್ಲಿ ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಈ ಸಂಬಂಧ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಎ.ಕೆ.ಚಾವ್ಲಾ ನೇತೃತ್ವದ ನ್ಯಾಯಪೀಠವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿ ವರದಿ ಸಲ್ಲಿಕೆಗೆ ಆರು ವಾರಗಳ ಗಡುವು ನೀಡಿದೆ. ಕಾಂಗ್ರೆಸ್ ಮತ್ತು ಬಿಜೆಪಿ ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಯ ನಿಯಮಗಳನ್ನು ಗಾಳಿಗೆ ತೂರಿ, ಬ್ರಿಟನ್ ಮೂಲದ ವೇದಾಂತ ರಿಸೋರ್ಸಸ್ ಕಂಪನಿಗಳ ಭಾರತೀಯ ಘಟಕಗಳಿಂದ ದೇಣಿಗೆ ಸಂಗ್ರಹಿಸಿದೆ ಎಂಬ ಪ್ರಕರಣದ ಬಗ್ಗೆ 2014ರಲ್ಲಿ ನೀಡಿದ ತೀರ್ಪಿನ ಅನುಷ್ಠಾನದ ಬಗ್ಗೆ ವರದಿ ನೀಡುವಂತೆ ನ್ಯಾಯಪೀಠ ಆದೇಶಿಸಿದೆ.

ಎಫ್‍ಸಿಆರ್ ಕಾಯ್ದೆಯ ಸೆಕ್ಷನ್ 4ರ ಅನ್ವಯ, ರಾಜಕೀಯ ಪಕ್ಷಗಳು ಅಥವಾ ಜನಪ್ರತಿನಿಧಿಗಳು ವಿದೇಶಿ ದೇಣಿಗೆ ಅಥವಾ ವಂತಿಗೆ ನೀಡುವುದನ್ನು ನಿಷೇಧಿಸಲಾಗಿದೆ. 2014ರ ಮಾರ್ಚ್ 28ರಂದು ಚುನಾವಣಾ ಆಯೋಗ ಮತ್ತು ಗೃಹ ಸಚಿವಾಲಯವು ಉಭಯ ಪಕ್ಷಗಳ ಬ್ಯಾಂಕ್ ಖಾತೆಗಳನ್ನು ಆರು ತಿಂಗಳ ಕಾಲ ಪರಿಶೀಲಿಸಿ ವರದಿ ನೀಡಬೇಕೆಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿತ್ತು.  ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾಮ್ರ್ಸ್ (ಎಡಿಆರ್) ಎಂಬ ಸ್ವಯಂ ಸೇವಾ ಸಂಸ್ಥೆಯು ದೆಹಲಿ ಹೈಕೋರ್ಟ್ ಆದೇಶ ಪಾಲಿಸದ ಸರ್ಕಾರದ ಧೋರಣೆ ವಿರುದ್ಧ ನ್ಯಾಯಾಲಯ ನಿಂದನೆ ದಾವೆ ಹೂಡಿತ್ತು. ತೀರ್ಪು ನೀಡಿ ಮೂರು ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಲಾಗಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Sri Raghav

Admin