ರಾಜ್ಯದಲ್ಲಿ ತೀವ್ರ ಬರಗಾಲದಿಂದ 17 ಸಾವಿರ ಕೋಟಿ ನಷ್ಟ : ಪರಮೇಶ್ವರ್

parmeshwar-chikkamangaluru

ಚಿಕ್ಕಮಗಳೂರು,ಏ.28- ರಾಜ್ಯದಲ್ಲಿ ತೀವ್ರ ಬರಗಾಲದಿಂದಾಗಿ ಹದಿನೇಳು ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ ನಿ.,ವತಿಯಿಂದ ಕಡೂರು ತಾಲ್ಲೂಕು ಸಿಂಗಟಗೆರೆಯಲ್ಲಿ ನೂತನವಾಗಿ ನಿರ್ಮಿಸಿರುವ ಸಹಕಾರ ಕೇಂದ್ರ ಬ್ಯಾಂಕಿನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಬರಗಾಲ ಅವರಿಸಿದ್ದು 2016-17ನೇ ಸಾಲಿನಲ್ಲಿ 169 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿತ್ತು. ಆದರೆ 176 ತಾಲ್ಲೂಕುಗಳಲ್ಲೂ ಕೂಡ ಬರಗಾಲ ಆವರಿಸಿದೆ. ರಾಜ್ಯದ ಯಾವ ತಾಲ್ಲೂಕುಗಳಿಗೆ ಭೇಟಿ ನೀಡಿದರೆ ಅಲ್ಲಿ ಕುಡಿಯುವ ನೀರಿಗೆ, ಜಾನುವಾರುಗಳ ಮೇವಿಗೆ ತೊಂದರೆಇದೆ.ಎಂದ ಅವರು ಕೃಷಿ ಅವಲಂಬಿಸಿರುವ ಜನರು ಊರು ಬಿಟು ಹೋಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರದ ನಿಯಮದಂತೆ 5000 ಕೋಟಿ ಬರದಿಂದ ನಷ್ಟ ಉಂಟಾಗಿದೆ. ಕೇಂದ್ರ ಸರ್ಕಾರ ಕೇವಲ 1652 ಕೋಟಿ ಬರ ಪರಿಹಾರಕ್ಕಾಗಿ ಮಂಜೂರು ಮಾಡಿದ್ದು ಕೇಂದ್ರದಿಂದ ಸಂಪೂರ್ಣ ನೆರವು ಬಂದಿಲ್ಲ ಎಂದ ಅವರು ರಾಜ್ಯ ಸರ್ಕಾರ ಕುಡಿಯುವ ನೀರಿಗೆ, ಜಾನುವಾರುಗಳ ಮೇವಿಗೆ ತೊಂದರೆ ಆಗದಂತೆ ಕ್ರಮ ಕೈಗೊಂಡಿದೆ. ಜಿಲ್ಲೆಗೆ ರೂ.11ಕೋಟಿ 60 ಲಕ್ಷ ರೂಗಳನ್ನು ಬಿಡುಗಡೆ ಮಾಡಿದ್ದು ಕುಡಿಯುವ ನೀರಿಗೆ ಆದ್ಯತೆ ಮೇಲೆ ಹಣ ನೀಡಲಾಗಿದೆ ಎಂದರು.

ಶಾಸಕ ವೈ. ಎಸ್. ವಿ ದತ್ತ ಮಾತನಾಡಿ, ಕಡೂರು ತಾಲ್ಲೂಕಿನಲ್ಲಿ ತೀವ್ರವಾದ ಬರಗಾಲವಿದ್ದು ಎಷ್ಟು ಅಡಿ ಕೊಳವೆ ಬಾವಿ ಕೊರೆದರೂ ನೀರು ಬರುತ್ತಿಲ್ಲ ಈ ತಾಲ್ಲೂಕಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಲ್ಲು ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.ಜಿಲ್ಲಾ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಧರ್ಮೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯ ಕೆ.ಆರ್.ಮಹೇಶ್ ಒಡೆಯರ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಸವಿತಾ ಕಲ್ಲೇಶ್, ಗ್ರಾ.ಪಂ ಅಧ್ಯಕ್ಷೆ ಕವಿತಾ ಸತೀಶ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Sri Raghav

Admin