ರಾಜ್ಯದ ಜನತೆಯೇ ನನಗೆ ರೋಲ್ ಮಾಡೆಲ್ : ಕುಮಾರಸ್ವಾಮಿ
ಮೈಸೂರು, ಫೆ.18- ರಾಜ್ಯದ ಜನತೆಯೇ ನನಗೆ ರೋಲ್ ಮಾಡೆಲ್ ಆಗಿದ್ದಾರೆ. ಹಾಗಾಗಿಯೇ ರಾಜ್ಯಾದ್ಯಂತ ಸಂಚರಿಸಿ ಕಾರ್ಯಕರ್ತರ ಗೊಂದಲ ನಿವಾರಿಸಿ ಪಕ್ಷವನ್ನು ಸಂಘಟಿಸುವ ಕಾರ್ಯದಲ್ಲಿ ನಿರತನಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ಸಾಕಷ್ಟು ಗೊಂದಲಗಳು ಇವೆ. ಈ ಬಗ್ಗೆ ಗೊಂದಲ ಸೃಷ್ಟಿಯಾಗಬಾರದು ಎಂದು 125 ಅಭ್ಯರ್ಥಿಗಳ ಪಟ್ಟಿಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಬಿಡುಗಡೆ ಮಾಡಲಿದ್ದಾರೆ. ನನ್ನನ್ನು ರಾಜ್ಯಾದ್ಯಂತ ಸಂಚರಿಸಿ ಕಾರ್ಯಕರ್ತರ ಗೊಂದಲ ನಿವಾರಣೆಗೂ ಸೂಚಿಸಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿ ನರೇಂದ್ರ ಮೋದಿ ಅವರು ಇಡೀ ದೇಶಾದ್ಯಂತ ಸಂಚರಿಸಿ ಮಾತನಾಡಲು ಪಕ್ಷ ಅವಕಾಶ ನೀಡಿತ್ತು. ಹಾಗಾಗಿ ಕೇಂದ್ರದಲ್ಲಿ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದರು.
ಆದರೂ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ರೋಲ್ ಮಾಡೆಲ್ ಅಲ್ಲ. ರಾಜ್ಯದ ಜನರೇ ರೋಲ್ ಮಾಡೆಲ್ ಎಂದು ಪ್ರಶ್ನೆಯೊಂದಕ್ಕೆ ಮಾರ್ಮಿಕವಾಗಿ ಉತ್ತರಿಸಿದರು.
ಮುಂಬರುವ 2018ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಜನರಯಲ್ಲಿ ಯಾವುದೇ ರೀತಿಯ ಗೊಂದಲ ಉಂಟಾಗದಿರಲಿ ಎಂಬ ಹಿನ್ನೆಲೆಯಲ್ಲಿ ಮಾ.15ರಂದು ಜೆಡಿಎಸ್ನ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು. ಯಾವುದೇ ಕಾರಣಕ್ಕೂ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ. ಪಕ್ಷ ಸದೃಢವಾಗಿದೆ. ಕಾರ್ಯಕರ್ತರಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಉಂಟಾಗದಿರಲು ವರ್ಷಕ್ಕೆ ಮೊದಲೇ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ. ಚುನಾವಣೆ ವೇಳೆಗೆ ರಾಜ್ಯದ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತಿದೆ ಎಂದು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕುಮಾರಸ್ವಾಮಿ, ನಮ್ಮ ಕುಟುಂಬದಿಂದ ದೇವೇಗೌಡರು ನಾವು ಬಿಟ್ಟರೆ ಮತ್ತ್ಯಾರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈಗಾಗಲೇ ಈ ಬಗ್ಗೆ ದೇವೇಗೌಡರೇ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಹಲವು ಕ್ಷೇತ್ರದ ಕಾರ್ಯಕರ್ತರು ತಮ್ಮ ಪತ್ನಿಯರನ್ನು ಸ್ಪರ್ಧೆಗೆ … ಒತ್ತಡ ಹೇರುತ್ತಿದಾದರೆ. ಹಾಗಿದ್ದೂ ನಮ್ಮ ತೀಂರ್ಆನ ಬದಲಾಯಿಸುವುದಿಲ್ಲ ಹಾಗೂ ಕಾರ್ಯಕರ್ತರು ಒತ್ತಾಯಿಸಿದ್ದಾರೆಂದು ಕುಟುಂಬದ ಯಾರೂ ಸ್ಪರ್ಧಿಸುವುದಿಲ್ಲ ಎಂದರು.
< Eesanje News 24/7 ನ್ಯೂಸ್ ಆ್ಯಪ್ >