ರಾಜ್ಯಪಾಲರನ್ನು ಭೇಟಿ ಮಾಡಿದ ನೂತನ ಸಿಎಸ್ ರತ್ನಪ್ರಭಾ

CS--002

ಬೆಂಗಳೂರು,ಡಿ.1-ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಇಂದು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿ ಮಾಡಿದರು. ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಪಾಲರನ್ನು ಭೇಟಿ ಮಾಡಿರುವ ಅವರು, ಅಧಿಕಾರ ವಹಿಸಿಕೊಂಡಿರುವ ಮಾಹಿತಿ ನೀಡಿದರು.
ವಿಧಾನಸೌಧದಲ್ಲಿಂದು ಸರ್ಕಾರದ ಸಚಿವಾಲಯದ ನೌಕರರ ಸಂಘದ ವತಿಯಿಂದ ನಿನ್ನೆ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾದ ಸುಭಾಷ್ ಚಂದ್ರ ಕುಂಟಿಆ ಅವರಿಗೆ ಬೀಳ್ಕೊಡುಗೆ ಹಾಗೂ ನೂತನ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಯಿತು.

Sri Raghav

Admin