ರಾಮಚಂದ್ರಾಪುರ ಮಠದ ಅವ್ಯವಹಾರಗಳ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

high-court

ಬೆಂಗಳೂರು, ಜು.25- ರಾಮಚಂದ್ರಾಪುರ ಮಠದ ಅವ್ಯವಹಾರಗಳ ಕುರಿತಂತೆ ತನಿಖೆಗೆ ಸರ್ಕಾರದ ಮುಖ್ಯಕಾರ್ಯದರ್ಶಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ರಾಮಚಂದ್ರಾಪುರ ಮಠಕ್ಕೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಮಠದಲ್ಲಿ ಅವ್ಯವಹಾರಗಳು ಹೆಚ್ಚಾಗಿದ್ದು, ಆಡಳಿತಾಧಿಕಾರಿಗಳನ್ನು ನೇಮಕ ಮಾಡಬೇಕು ಎಂಬ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಯವರು ಆದೇಶಿಸಿದ್ದರು. ಇದನ್ನು ಆಕ್ಷೇಪಿಸಿ ಶ್ರೀ ಮಠದ ವತಿಯಿಂದ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಮುಖ್ಯಕಾರ್ಯದರ್ಶಿಗಳ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Sri Raghav

Admin