Monday, April 14, 2025
Homeರಾಜ್ಯರಾಯರೆಡ್ಡಿ ಯೂಟರ್ನ್ : ಹೆಚ್.ಡಿ.ಕುಮಾರಸ್ವಾಮಿ ಲೇವಡಿ

ರಾಯರೆಡ್ಡಿ ಯೂಟರ್ನ್ : ಹೆಚ್.ಡಿ.ಕುಮಾರಸ್ವಾಮಿ ಲೇವಡಿ

H.D. Kumaraswamy

ಬೆಂಗಳೂರು, ಏ.೧೧– ರಾಜ್ಯವು ಭ್ರಷ್ಟಾಚಾರದಲ್ಲಿ ದೇಶದಲ್ಲಿಯೇ ನಂಬರ್ ಒನ್ ಆಗಿದೆ ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಯೂ ಟರ್ನ್ ಹೊಡೆದಿರುವ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

ಅಲ್ಲದೆ, ಮುಖ್ಯಮಂತ್ರಿ ಗುಣಗಾನ ಮಾಡಿರುವ ರಾಯರೆಡ್ಡಿ ಅವರಿಗೆ ಟಾಂಗ್ ಕೊಟ್ಟಿರುವ ಅವರು, ಸರಣಿ ಹಗರಣಗಳ ಸಿದ್ವಿಲಾಸಿ ಸಿಎಂ ಬಗ್ಗೆ ನಿಮಗೆ ಗೊತ್ತಿಲ್ಲವೇ ಎಂದು ಕಾಲೆಳೆದಿದ್ದಾರೆ.

ಈ ಬಗ್ಗೆ ಮಾಧ್ಯಮ್ ಹೇಳಿಕೆ ನೀಡಿರುವ ಅವರು, ಬಸವರಾಜ ರಾಯರೆಡ್ಡಿ ಅವರು ಯೂ ಟರ್ನ್ ಹೊಡೆಯುವ ಅಗತ್ಯವೇ ಇಲ್ಲ. ಅವರು ಸತ್ಯವನ್ನೇ ನುಡಿದಿದ್ದಾರೆ . ಮಹಾತ್ಮ ಗಾಂಧೀಜಿ ಅವರ ಸತ್ಯಮೇವ ಜಯತೇ ಘೋಷ ವಾಕ್ಯವನ್ನು ಕಾಂಗ್ರೆಸ್ ನಾಯಕರು ಅದೆಷ್ಟು ಶ್ರದ್ಧಾ ಶಕ್ತಿಯಿಂದ ಪರಿಪಾಲನೆ ಮಾಡುತ್ತಿದ್ದಾರೆ ಎಂಬುದಕ್ಕೆ ರಾಯರೆಡ್ಡಿ ಅವರ ಹೇಳಿಕೆಯೇ ಸಾಕ್ಷಿ ಎಂದು ತಿಳಿಸಿದ್ದಾರೆ.

ಗುತ್ತಿಗೆಯಲ್ಲಿ ಪರ್ಸಂಟೇಜ್ , ಕಮಿಷನ್ ದಂಧೆ ಆರಂಭಿಸಿದ್ದು, ಅನ್ಯಪಕ್ಷಗಳ ಸರ್ಕಾರಗಳೇ ಹೊರತು, ಜೆಡಿಎಸ್ ಸರ್ಕಾರವಲ್ಲ. ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಗುತ್ತಿಗೆದಾರರಿಗೆ ನಿಯಮಿತವಾಗಿ ಹಣ ಪಾವತಿ ಆಗುತ್ತಿತ್ತು, ವಿಳಂಬ ಎನ್ನುವ ಪ್ರಶ್ನೆಯೇ ಇರಲಿಲ್ಲ. ನನ್ನ ಆಡಳಿತದಲ್ಲಿ ಕಮಿಷನ್ ದಂವಿಧಾನಸೌದ್ ಮೆಟ್ಟಿಲು ಮುಟ್ಟಲು ಬಿಟ್ಟಿರಲಿಲ್ಲ. ಸೋ ಕಾಲ್ಡ್ ಸತ್ಯಸಂಸದರಾದ ಕಾಂಗ್ರೆಸ್ಸಿಗರು ಅರ್ಥ ಮಾಡಿಕೊಳ್ಳಬೇಕು ಎಂದು ಜೆಡಿಎಸ್ ಬಗ್ಗೆ ಹೇಳಿಕೆ ನೀಡಿದ್ದ ರಾಯರೆಡ್ಡಿ ಅವರಿಗೆ ಅವರು ತಿರುಗೇಟು ನೀಡಿದ್ದಾರೆ.

ಭ್ರ ಷ್ಟಾಚಾರದ ವಿರುದ್ಧ ಸಿದ್ದರಾಮಯ್ಯ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ರಾಯರೆಡ್ಡಿ ಹೇಳಿದ್ದಾರೆ. ಅವರು ಏಕಿಷ್ಟು ಹೆದರಿದರು ಎನ್ನುವುದನ್ನು ನಾನು ಅರ್ಥ ಮಾಡಿಕೊಳ್ಳಬಲ್ಲ . ಅಧಿಕಾರ ಮತ್ತು ಆಸರೆ ನಾಲಿಗೆಯ ಶಕ್ತಿಯನ್ನು ಕುಂದಿಸುತ್ತವೆ ಎಂದು ರಾಯರೆಡ್ಡಿ ಅವರ ಅಸಹಾಯಕತೆ ಬಗ್ಗೆ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಸಿಎಂ ಸಾಹೇಬರ ಸರಣಿ ಹಗರಣಗಳ ಸಿದ್ವಿಲಾಸದ ಬಗ್ಗೆ ಅರಿಯದಷ್ಟು ಮುಗ್ಧರೇ ರಾಯರೆಡ್ಡಿ? ಕರ್ನಾಟಕವನ್ನು ಕೊಳ್ಳೆ ಹೊಡೆಯುತ್ತಿರುವ ಕಾಂಗ್ರೆಸ್ ಈಸ್ಟ್ ಇಂಡಿಯಾ ಕಂಪನಿ ಸರ್ಕಾರದ ಭಾಗವಾಗಿರುವ ಅವರಿಗೆ ಜೆಡಿಎಸ್ ಕುರಿತು ಟೀಕಿಸುವ ನೈತಿಕತೆ ಎಲ್ಲಿದೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

RELATED ARTICLES

Latest News